- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ

queen Veerarani Abbakka [1]ಮಂಗಳೂರು: ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವೀರರಾಣಿ ಅಬ್ಬಕ್ಕ ಸ್ಮರಣೆಯ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು.

ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ-2017ನ್ನು ಉದ್ಘಾಟಿಸಿ ಮಾತನಾಡಿದರು.

ಏಕಲವ್ಯ ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ ಮಾತನಾಡಿ, ರಾಣಿ ಅಬ್ಬಕ್ಕಳ ಸ್ಮರಣೆಯಂತಹ ಕಾರ್ಯಕ್ರಮದಲ್ಲಿ ಪ್ರತಿಭೆಗಳನ್ನು ಪ್ರದರ್ಶಿಸುವ ಅವಕಾಶ ಶ್ಲಾಘನೀಯ. ಸೋಲು, ಗೆಲುವು ಚಿಂತಿಸದೆ ನೈಜ ಪ್ರತಿಭೆಯನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ರವೀಂದ್ರ ರೈ ಕಲ್ಲಿಮಾರ್, ಉಷಾ ಕಿರಣ್,, ಬೆನೆಡಿಕ್ಟ, ತಾ. ಪಂ ಸದಸ್ಯೆ ಪದ್ಮಾವತಿ ಮೊದಲಾದವರಿದ್ದರು.