ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ನಂತೂರು-ತಲಪಾಡಿ ಚತುಷ್ಪಥ ಅಗಲೀಕರಣ ಯೋಜನೆಯಲ್ಲಿ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿದ್ದರೂ ಟೋಲ್ ಶುಲ್ಕ ಸಂಗ್ರಹಕ್ಕೆ ಮಾತ್ರ ಮುಂದಾಗಿದ್ದು, ಸಾರ್ವಜನಿಕರು ಸಮರ್ಪಕವಾದ ರಸ್ತೆಯ ಪ್ರಯೋಜನ ಪಡೆಯದಿದ್ದರೂ ಟೋಲ್ ಸಂಗ್ರಹಿಸುವುದನ್ನು ಕರ್ನಾಟಕ ಗಡಿನಾಡು ರಕ್ಷಣಾ ವೇದಿಕೆ ವಿರೋಧಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಸಿದ್ದಿಕ್ ತಲಪಾಡಿ, ತಲಪಾಡಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾರ್ವಜನಿಕರು, ವಾಹನಗಳು, ತಳ್ಳುಗಾಡಿ, ಜಾನುವಾರು ಸಂಚರಿಸಲು ಸಮರ್ಪಕ ಸರ್ವಿಸ್ ರಸ್ತೆ ನಿರ್ಮಾಣವಾಗಬೇಕು.
ಮಳೆ ನೀರು ಹರಿದು ಹೋಗಲು ರಸ್ತೆಯ ಇಕ್ಕೆಲಗಳಲ್ಲಿಯೂ ಚರಂಡಿ ವ್ಯವಸ್ಥೆ, ತಲಪಾಡಿ ಚೆಕ್ ಪೋಸ್ಟ್ ಬಳಿಯಿಲ್ಲಿ ಬಸ್ ತಂಗುದಾಣ ಮತ್ತು ಸುಸಜ್ಜಿತ ಶೌಚಾಲಯ ನಿರ್ಮಾಣ, ಟೋಲ್ ಶುಲ್ಕದಲ್ಲಿ ವಿನಾಯಿತಿ, ಭೂ ಸ್ವಾಧೀನದಲ್ಲಿ ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಅವರು ಹೆದ್ದಾರಿ ಅಧಿಕಾರಿಗಳ ಮುಂದಿಟ್ಟಿದ್ದಾರೆ.
Click this button or press Ctrl+G to toggle between Kannada and English