ಮಂಗಳೂರು : ಫೆಬ್ರವರಿ 25 ರಂದು ಹಿಂದೂ ಸಂಘಟನೆಗಳು ನೀಡಿರುವ ಕರೆಗೆ ಸರ್ವೊಚ್ಛ ನ್ಯಾಯಾಲಯದ ನಿರ್ದೇಶನದಂತೆ ಬಂದ್ ನಡೆಸಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಿರುವ 44 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ಬಂದ್ ಅಥವಾ ಹರತಾಳ ನಡೆಸುತ್ತಾರೆ ಎನ್ನುವ ಬಗ್ಗೆ ಸೆಕ್ಷನ್ 107ರ ಪ್ರಕಾರ ವಿವರಣೆ ಕೇಳಿ ನೋಟಿಸ್ ನೀಡಲಾಗಿದೆ ಎಂದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಗರಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುವುದು. ಕಾರ್ಯಕ್ರಮ ಆಯೋಜಕರಿಗೆ ಸೂಕ್ತ ರಕ್ಷಣೆ ನೀಡಲಾಗುವುದು. ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಬಗ್ಗೆ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ದ. ಕ. ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ನಿರ್ವಹಿಸಲು ಹೊರ ಜಿಲ್ಲೆಗಳಿಂದ ಸುಮಾರು 2,000 ಪೊಲೀಸರು, 20 ಕೆಎಸ್ಆರ್‌ಪಿ ಪ್ಲಟೂನ್ ಶೀಘ್ರದಲ್ಲೇ ಜಿಲ್ಲೆಗೆ ಆಗಮಿಸಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲೆಯ 1,500 ಪೊಲೀಸರನ್ನು ಸಹ ಭದ್ರತೆ ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ವಿವರಿಸಿದರು.
Click this button or press Ctrl+G to toggle between Kannada and English