ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕೊಡುಗೆಗಳು

12:47 AM, Thursday, March 16th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

State budgetಮಂಗಳೂರು  :- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬುಧವಾರ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಪ್ರಮುಖ ಕೊಡುಗೆಗಳು ದೊರಕಿವೆ;

50 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-67ರ ಮಂಗಳೂರು-ಅತ್ರಾಡಿ ರಸ್ತೆಯಲ್ಲಿ 2.5 ಕಿ.ಮೀ. ಉದ್ದ ರಸ್ತೆಯ ಅಭಿವೃದ್ಧಿ ( ಕಾವೂರು-ಮರಕಡ ಮಹಾನಗರಪಾಲಿಕೆ ಗಡಿಯಿಂದ ಕೆಂಜಾರು ವಿಮಾನ ನಿಲ್ದಾಣದ ಪ್ರವೇಶ ದ್ವಾರದವರೆಗೆ ಚತುಷ್ಫಥ ರಸ್ತೆ).

ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ವಿಸ್ತರಣೆಗೆ 286 ಎಕರೆ ಭೂಸ್ವಾಧೀನಕ್ಕಾಗಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ- ರಾಜ್ಯ ಸರಕಾರದಿಂದ ಅಗತ್ಯ ಸೌಲಭ್ಯ

ಮೊಗವೀರರು, ಬೆಸ್ತರ ಸಮಗ್ರ ಅಭಿವೃದ್ಧಿಗಾಗಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಸ್ಥಾಪನೆ

10 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ

3 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಾದರಿಯಲ್ಲಿ ಪ್ರಾದೇಶಿಕ ಹಾಗೂ ಉನ್ನತ ಮಕ್ಕಳ ಆರೋಗ್ಯ ಸಂಸ್ಥೆಯ ಸ್ಥಾಪನೆ

ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕಾಗಿ 5 ಕೋಟಿ ರೂ. ವೆಚ್ಚದಲ್ಲಿ ಹಾಲಿ ಜೆಟ್ಟಿಯನ್ನು ಇನ್ನೂ 75 ಮೀಟರ್ ವಿಸ್ತರಣೆ

ಕರಾವಳಿಯ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ 3000 ಮನೆಗಳ ನಿರ್ಮಾಣ

ಕರಾವಳಿಯ 200 ಮಂಜುಗಡ್ಡೆ ಸ್ಥಾವರಗಳಿಗೆ, 35 ಶೈತ್ಯಾಗಾರಗಳಿಗೆ ವಿದ್ಯುಚ್ಛಕ್ತಿ ಮೇಲೆ ನೀಡುವ ಸಹಾಯಧನ ಪ್ರತೀ ಯುನಿಟ್ ವಿದ್ಯುತ್‍ಗೆ ರೂ. 1.75ಕ್ಕೆ ಹೆಚ್ಚಳ

ಕರಾವಳಿಯ ನದಿಗಳನ್ನು ಜೋಡಿಸುವ ಪಶ್ಚಿಮವಾಹಿನಿ ಯೋಜನೆಗೆ 100 ಕೋಟಿ ರೂ.

ಈ ವರ್ಷದಿಂದ ಮಂಗಳೂರು ತಾಲೂಕಿನ ಸಸಿಹಿತ್ಲು ಕಡಲ ತೀರದಲ್ಲಿ ರಾಷ್ಟ್ರೀಯ ವಾರ್ಷಿಕ ಸರ್ಫಿಂಗ್ ಉತ್ಸವ ಆಯೋಜನೆ

ಮೂಡಬಿದ್ರೆ ಹಾಗೂ ಕಡಬ ಪ್ರತ್ಯೇಕ ತಾಲೂಕು ಸ್ಥಾಪನೆ

ಬಂಟ್ವಾಳದಲ್ಲಿ ನೂತನ ಆರ್.ಟಿ.ಓ. ಕಚೇರಿ ಸ್ಥಾಪನೆ

ಮಂಗಳೂರಿನಲ್ಲಿ ಹಜ್‍ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 20 ಕೋಟಿ ರೂ. ಅನುದಾನ

ಮಂಗಳೂರಿನಲ್ಲಿ ಸಮುದ್ರ ನೀರು ಸಂಸ್ಕರಣಾ ಘಟಕ ಸ್ಥಾಪನೆ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆ

ಪಿಲಿಕುಲ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ 35.69 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ತಾರಾಲಯ ಡಿಸೆಂಬರ್ 2017ರಲ್ಲಿ ಪ್ರಾರಂಭ

ಮಂಗಳೂರು ಜಿಲ್ಲಾ ನ್ಯಾಯಾಲಯದ ಛಾವಣಿಯಲ್ಲಿ ಗ್ರಿಡ್ ಸಂಪರ್ಕವಿರುವ ಸೋಲಾರ್ ಛಾವಣಿ ಅಳವಡಿಕೆ

ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಹಿಂದಿರುಗುವ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕೇರಳ ಮಾದರಿಯ ಕಾರ್ಯಕ್ರಮ ಜಾರಿ.

ಕಾರ್ಯಸಾಧ್ಯ ಬಜೆಟ್: ಸಚಿವ ಯು.ಟಿ. ಖಾದರ್
ಮ0ಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪ್ರಿಯ ಮಾತ್ರವಲ್ಲದೇ, ಪ್ರಾಯೋಗಿಕವಾಗಿ ಕಾರ್ಯಸಾಧ್ಯ ಬಜೆಟ್ ಆಗಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಸಮಾಜದ ಎಲ್ಲಾ ವರ್ಗದ ಏಳಿಗೆಯ ಹಿತದೃಷ್ಠಿಯನ್ನಿಟ್ಟುಕೊಂಡು ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಿಸಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ನೀಡುವ ಅಕ್ಕಿಯನ್ನು 5 ಕೆ.ಜಿ.ಯಿಂದ 7 ಕೆ.ಜಿ.ಗೆ ಹೆಚ್ಚಿಸಲಾಗಿದೆ. ಗ್ಯಾಸ್ ಸಂಪರ್ಕ ಇಲ್ಲದವರಿಗೆ ಉಚಿತ ಗ್ಯಾಸ್ ಸಂಪರ್ಕ ನೀಡುವ ಯೋಜನೆ, ವೃದ್ಧಾಶ್ರಮ, ಅನಾಥಾಲಯ, ಹಾಸ್ಟೆಲ್‍ಗಳಿಗೆ ಉಚಿತ ಅಕ್ಕಿ, ಕಡಿಮೆ ದರದಲ್ಲಿ ಆಹಾರ ಒದಗಿಸುವ ‘ನಮ್ಮ ಕ್ಯಾಂಟೀನ್” ಸೇರಿದಂತೆ ಸಮಾಜದ ದುರ್ಬಲರ ಏಳಿಗೆಯನ್ನು ಬಜೆಟ್ ಗುರಿಯಾಗಿರಿಸಿದೆ. ಜಿ.ಪಂ. ತಾ.ಪಂ. ಸದಸ್ಯರ ಗೌರವಧನ ಹೆಚ್ಚಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಮಹತ್ತರ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮಂಗಳೂರು ವಿವಿಯಲ್ಲಿ ಬ್ಯಾರಿ ಅಧ್ಯಯನ ಪೀಠ, ಹಜ್ ಭವನ, ವಿಮಾನ ನಿಲ್ದಾಣ ಅಭಿವೃದ್ಧಿ, ಪಶ್ಚಿಮವಾಹಿನಿಗೆ 100 ಕೋಟಿ ರೂ., ಮೂಡಬಿದ್ರೆ, ಕಡಬ ತಾಲೂಕು ಸೇರಿದಂತೆ ಜಿಲ್ಲೆಯ ದೀರ್ಘ ಕಾಲದ ಬೇಡಿಕೆಗಳನ್ನು ಈಡೇರಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸುವುದಾಗಿ ಸಚಿವ ಖಾದರ್ ತಿಳಿಸಿದ್ದಾರೆ.

ಮೀನುಗಾರರಿಗೆ ನ್ಯಾಯ- ಗಲ್ಫ್ ಉದ್ಯೋಗಿಗಳಿಗೆ ನೆಮ್ಮದಿ: ಶಾಸಕ ಬಾವಾ
ಮ0ಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್‍ನಲ್ಲಿ ಮೀನುಗಾರರಿಗೆ ನ್ಯಾಯ ಒದಗಿಸಿದೆ ಎಂದು ಮಂಗಳೂರು ಉತ್ತರ ಶಾಸಕ ಬಿ.ಎ. ಮೊಹಿದೀನ್ ಬಾವಾ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಮೀನುಗಾರರಿಗೆ ಡೀಸೆಲ್ ಮತ್ತು ಸೀಮೆಎಣ್ಣೆ ಸಬ್ಸಿಡಿ ಒದಗಿಸಿದ್ದರು. ಇದೀಗ ಮೊಗವೀರರು, ಬೆಸ್ತರ ಸಮಗ್ರ ಅಭಿವೃದ್ಧಿಗಾಗಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಸ್ಥಾಪನೆ ಮಾಡುವ ಮೂಲಕ ಮೀನುಗಾರಿಕೆ ಕುಲಕಸುಬಿನ ಸಮುದಾಯದ ಏಳಿಗೆಗೆ ಮುಖ್ಯಮಂತ್ರಿಗಳು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಅದೇ ರೀತಿ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಹಿಂದಿರುಗುವ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕೇರಳ ಮಾದರಿಯ ಕಾರ್ಯಕ್ರಮ ಜಾರಿ ಮಾಡಲಾಗಿದೆ. ಬಜೆಟ್‍ಗೆ ಮುಂಚೆ ತಾನು ಮುಖ್ಯಮಂತ್ರಿಗಳಲ್ಲಿ ಈ ಬೇಡಿಕೆ ಇಟ್ಟಿದ್ದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ಪ್ರಕಟಿಸಿರುವುದು ಶ್ಲಾಘನೀಯ. ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಿಂದೆಂದೂ ನೀಡದಷ್ಟು ಅನುದಾನ ನೀಡಲಾಗಿದೆ ಎಂದು ಶಾಸಕ ಮೊಹಿದೀನ್ ಬಾವಾ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English