ಮಂಗಳೂರು : ಐಟಿ ದಾಳಿ ನಡೆಸುವ ಮೂಲಕ ರಾಜ್ಯ ಸರಕಾರದ ವಿರದ್ಧು ಕೇಂದ್ರ ಸರಕಾರವು ಪಿತೂರಿ ನಡೆಸುತ್ತಿದೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ ಆಪಾದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಐಟಿ ದಾಳಿ ನಡೆಯುತ್ತಿದೆ. ಅವರೆಲ್ಲಾ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಕೋಟಿಗಟ್ಟಲೆ ಹಣ ಪತ್ತೆ ಮಾಡಿದರು ಎಂದಾಕ್ಷಣ ಅದಕ್ಕೆ ಭ್ರಷ್ಟಾಚಾರದ ಹೆಸರು ನೀಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.
ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ಡೈರಿ ಹೆಸರಿನಲ್ಲಿ ಕೋಲಾಹಲವೆಬ್ಬಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ರಾಜ್ಯದ ಸಮಸ್ಯೆಗಳ ಚರ್ಚೆಗೆ ಆಸಕ್ತಿ ತೋರುತ್ತಿಲ್ಲ. ಸವೋಚ್ಛ ನ್ಯಾಯಾಲಯವೇ ಹಲವು ತೀರ್ಪುಗಳಲ್ಲಿ ಡೈರಿಯನ್ನು ಯಾವುದೇ ಪ್ರಕರಣದಲ್ಲಿ ಸಾಕ್ಷದ ಭಾಗವಾಗಿ ಪರಿಗಣಿಸುವಂತಿಲ್ಲ ಎಂದು ಹೇಳಿದೆ. ಆದರೆ ಬಿಜೆಪಿ ಮಾತ್ರ ಡೈರಿ ಹೆಸರಿನಲ್ಲಿ ಕಾಲಹರಣ ಮಾಡುತ್ತಿದೆ ಎಂದು ಐವನ್ ಡಿಸೋಜಾ ಆಕ್ಷೇಪಿಸಿದರು.
Click this button or press Ctrl+G to toggle between Kannada and English