ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಿಂದ ವಿದ್ಯಾರ್ಥಿ ನಿಲಯದ ಬಾಲಕಿಯ ಕಲ್ಯಾಣ ಹರಣ

8:50 PM, Saturday, April 1st, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Kalyanaಮಂಗಳೂರು : ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಚೇರಿಯಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ನಾಗರಾಜಪ್ಪ ಬಂಧಿತ ಆರೋಪಿ. ವಿಷಯ ತಿಳಿದ ಮಹಿಳಾ ಪೊಲೀಸರು ಬಾಲಕಿಯಿಂದ ಮಾಹಿತಿ ಪಡೆದು, ಅಧಿಕಾರಿಯನ್ನು ಬಂಧಿಸಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ವೈದ್ಯಕೀಯ ಪರೀಕ್ಷೆಯಲ್ಲೂ ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಹಾಸ್ಟೆಲ್ ತಪಾಸಣೆಯ ನೆಪದಲ್ಲಿ ಪದೇಪದೇ ಅಶೋಕನಗರ ಹಾಸ್ಟೆಲ್‌ಗೆ ಹೋಗುತ್ತಿದ್ದ ಈ ಅಧಿಕಾರಿ ಭೇಟಿ ನೀಡಿದಾಗಲೆಲ್ಲಾ ಅಪ್ರಾಪ್ತೆಯನ್ನು ವಿದ್ಯಾರ್ಥಿ ನಿಲಯದ ಕಚೇರಿಗೆ ಕರೆಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇದರಿಂದ ಸಂಶಯಗೊಂಡ ಇತರ ವಿದ್ಯಾರ್ಥಿನಿಯರು ಬಾಲಕಿಯಲ್ಲಿ ವಿಚಾರಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು, ಅಧಿಕಾರಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English