ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನ ಕಾರಾಗೃಹದಲ್ಲಿ ಕೈದಿ ಸಾವು

6:02 PM, Monday, April 3rd, 2017
Share
1 Star2 Stars3 Stars4 Stars5 Stars
(No Ratings Yet)
Loading...

Mangalore Jailಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟವರನ್ನ ಬೆಳುವಾಯಿಯ ಸದಾನಂದ (40) ಎಂದು ಗುರುತಿಸಲಾಗಿದೆ.

ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2015ರಲ್ಲಿ ಸದಾನಂದ ಮೂಡುಬಿದಿರೆ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಶನಿವಾರ ತಡರಾತ್ರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಜಿಲ್ಲಾ ಕಾರಾಗೃಹದಲ್ಲಿ ಕೆಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಸದಾನಂದ ಬಳಲುತ್ತಿದ್ದರು. ಆದರೆ ಜೈಲು ಸಿಬ್ಬಂದಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸದೆ ನಿರ್ಲಕ್ಷ್ಯ ತಾಳಿದ್ದರು. ಸದಾನಂದನ ರೋಗ ಉಲ್ಬಣಿಸಿದ ಬಳಿಕ ಆಸ್ಪತ್ರೆಗೆ ಕೊಂಡೊಯ್ದಿದ್ದರಿಂದ ಸಾವನ್ನಪ್ಪಿದ್ದಾರೆ ಎಂಬ ದೂರು ಕೇಳಿ ಬಂದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English