- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಏ. 14 ಅಗ್ನಿಶಾಮಕ ಸೇವಾ ಸಪ್ತಾಹದ

Saptahaಮಂಗಳೂರು: ಮಂಗಳೂರು ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಏ. 14ರಿಂದ 20ರವರೆಗೆ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ  ಮುಂಬೈ ಬಂದರಿನಲ್ಲಿ ನಡೆದಿದ್ದ ಹಡಗು ಸ್ಫೋಟ ದುರಂತದಲ್ಲಿ ವೀರಮರಣ ಹೊಂದಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ನೆನಪಿಗಾಗಿ ಶುಕ್ರವಾರ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.

1944ರ ಏ. 14ರಂದು ಮುಂಬೈ ಬಂದರಿನಲ್ಲಿ ಮದ್ದು ಗುಂಡುಗಳನ್ನು ಸಾಗಿಸುತ್ತಿದ್ದ ಹಡಗು ಘೋರ ಅಗ್ನಿ ಅನಾಹುತಕ್ಕೆ ಒಳಗಾಗಿತ್ತು. ಆ ಬೆಂಕಿ ನಂದಿಸಲು ಮುಂಬೈ ಫೈರ್ ಬ್ರಿಗೇಡ್‌ನ ಅಧಿಕಾರಿ, ಸಿಬ್ಬಂದಿ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಹಡಗು ಸ್ಫೋಟಗೊಂಡು 66 ಜನ ಅಧಿಕಾರಿ ಮತ್ತು ಸಿಬ್ಬಂದಿ ವೀರಮರಣ ಹೊಂದಿದ್ದರು. ಈ ಹುತಾತ್ಮರ ನೆನಪಿಗಾಗಿ ಪ್ರತೀ ವರ್ಷ ಏ. 14 ರಿಂದ 20 ರವರೆಗೆ ಸಪ್ತಾಹವನ್ನು ದೇಶದಾದ್ಯಂತ ಅಗ್ನಿ ಶಾಮಕ ಸೇವಾ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಈ ಸಪ್ತಾಹದ ಅವಧಿಯಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ತಿಳುವಳಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕಾ ಕೇಂದ್ರಗಳು, ವಿದ್ಯಾ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳಲ್ಲಿ ಅಗ್ನಿ ಸುರಕ್ಷತೆ ಬಗ್ಗೆ ಉಪನ್ಯಾಸ, ಪ್ರಾತ್ಯಕ್ಷಿಕೆ, ಅನುಕು ಪ್ರದರ್ಶನ ಆಯೋಜಿಸಿ ಸಾರ್ವಜನಿಕರಲ್ಲಿ ಸುರಕ್ಷತೆ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ. 2017ನೇ ಸಾಲಿನಲ್ಲಿ