ಬಂಟ್ವಾಳ: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷನನ್ನು ಪಂಚಾಯತ್ ಒಳಗೆನೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ವಿಟ್ಲದ ಕರೋಪಾಡಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಎರಡು ಬೈಕ್ಗಳಲ್ಲಿ ಮಾರಕಾಯುಧಗಳೊಂದಿಗೆ ಬಂದ ನಾಲ್ವರು ಮುಸುಕುಧಾರಿಗಳು ಕರೋಪಾಡಿ ಪಂಚಾಯತ್ ಒಳಗೆ ನುಗ್ಗಿ ಒಳಗಿದ್ದ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಮೇಲೆ ಕಾರದ ಪುಡಿ ಎರಚಿ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಈ ಸಂದರ್ಭ ಪಂಚಾಯತ್ ಕಚೇರಿ ಒಳಗಿದ್ದ ಸಿಬ್ಬಂದಿಗೂ ತಲ್ವಾರ್ ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಮಾರಕಾಯುಧ ದಾಳಿ ವೇಳೆ ಗಂಭೀರ ಗಾಯಗೊಂಡಿದ್ದ ಜಲೀಲ್ರನ್ನು ದೇರಳಕಟ್ಟೆ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೋರಸೆ ಸೇರಿದಂತೆ ಹಿರಿಯ ಅಧಿಕಾರಿಗಳು, ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English