ಕೃಷಿಕರು ಬಿಜೆಪಿ ಪರ ಸಂಸದ ನಳಿನ್ ಹರ್ಷ

5:44 PM, Thursday, April 27th, 2017
Share
1 Star2 Stars3 Stars4 Stars5 Stars
(No Ratings Yet)
Loading...

Nalin Kumar ಮಂಗಳೂರು : ಸುಳ್ಯ ಮತ್ತು ಪುತ್ತೂರು ಎಪಿಎಂಸಿಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ್ದು, ಕೃಷಿಕರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಮತ್ತೆ ಸಾಬೀತು ಪಡಿಸಿದ್ದಾರೆ. ಕೃಷಿಕರ ವಿಶ್ವಾಸಕ್ಕೆ ಪೂರಕವಾಗಿ ಪಾರದರ್ಶಕ ಆಡಳಿತ ನೀಡಲು ಬಿಜೆಪಿ ಸದಾ ಬದ್ಧವಾಗಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಜನ ವಿರೋಧಿ ನೀತಿಯಿಂದ ಜನತೆ ರೋಸಿ ಹೋಗಿದ್ದಾರೆ. ನರೇಂದ್ರ ಮೋದಿ ಅವರ ನೇತ್ರತ್ವದಲ್ಲಿ ಕೇಂದ್ರ ಸರ್ಕಾರದ ಅಭಿವೃದ್ಧಿ ಪರ ಹಾಗೂ ಪಾರದರ್ಶಕ ಆಡಳಿತಕ್ಕೆ ಇಡೀ ದೇಶದಲ್ಲಿ ಜನ ಮನ್ನಣೆ ದೊರೆಯುತ್ತಿದೆ. ಸುಳ್ಯ ಮತ್ತು ಪುತ್ತೂರು ಎಪಿಎಂಸಿಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ನೀಡಿದ ಮತದಾರರನ್ನು ಅಭಿನಂದಿಸುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English