ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

8:34 PM, Wednesday, May 24th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Ganja ಮಂಗಳೂರು : ಬರ್ಕೆ ಪೊಲೀಸರು ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮೊಬೈಲ್ , ನಗದು ವಶಪಡಿಸಿಕೊಂಡಿದ್ದಾರೆ.

ನಗರದ ಮಂಗಳಾ ಕ್ರೀಡಾಂಗಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಒಡಿಶಾದ ಶಾಂತನುಕುಮಾರ್ ಶಾಹು (20) ಹಾಗೂ ಪಣಂಬೂರು ಮೀನಕಳಿಯದ ವಿಕ್ರಮ್ (27) ಎಂಬವರನ್ನು ಬಂಧಿಸಲಾಗಿದೆ. 2.5 ಲಕ್ಷ ಮೌಲ್ಯದ 5 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English