- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Ganja [1]ಮಂಗಳೂರು : ಬರ್ಕೆ ಪೊಲೀಸರು ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮೊಬೈಲ್ , ನಗದು ವಶಪಡಿಸಿಕೊಂಡಿದ್ದಾರೆ.

ನಗರದ ಮಂಗಳಾ ಕ್ರೀಡಾಂಗಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಒಡಿಶಾದ ಶಾಂತನುಕುಮಾರ್ ಶಾಹು (20) ಹಾಗೂ ಪಣಂಬೂರು ಮೀನಕಳಿಯದ ವಿಕ್ರಮ್ (27) ಎಂಬವರನ್ನು ಬಂಧಿಸಲಾಗಿದೆ. 2.5 ಲಕ್ಷ ಮೌಲ್ಯದ 5 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.