ಮಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ರೀತಿಯಲ್ಲಿ ಬಹುಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ಹಾಗೂ ಹಲ್ಲೆಗಳನ್ನು ನಡೆಸುತ್ತಾ ಬಂದಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಆರೋಪಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸೈದ್ಧಾಂತಿಕ ಹಲ್ಲೆ ಹಾಗೂ ಹತ್ಯೆಗಳು ಪೈಪೋಟಿಯಲ್ಲಿ ನಡೆಯುತ್ತಿದೆ ಎಂದು ದೂರಿದರು.
ದೌರ್ಜನ್ಯಕ್ಕೆ ಮತ್ತೊಂದು ಸೇರ್ಪಡೆ ಎಂದರೆ ಬಿಜೆಪಿ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಎಸ್.ಹರೀಶ್ ಅವರನ್ನು ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಆಮಾನುಷವಾಗಿ ಕೊಲೆ ಮಾಡಿರುವುದು. ಈ ಹಿಂದೆ ನಡೆದಿರುವ ಪ್ರಕರಣಗಳಲ್ಲಿ ಪ್ರಾಮಾಣಿಕವಾಗಿ ತನಿಖೆ ನಡೆಸದೆ ಅಪರಾಧಿಗಳಿಗೆ ಶಿಕ್ಷೆಯಾಗದಿರುವುದು ಈ ರೀತಿಯ ಮತ್ತಷ್ಟು ಹತ್ಯೆಗಳಿಗೆ ಪ್ರಚೋದನೆ ನೀಡಿದಂತಾಗಿದೆ ಎಂದು ಅವರು ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರು ವರ್ಷದ ಸಾಧನೆಗಳನ್ನು ಜನರಿಗೆ ತಲುಪಿಸಿ ಕರ್ನಾಟಕದ ಮುಂದಿನ ಚುನಾವಣೆಯಲ್ಲಿ ಕಮಲ ಅರಳಿಸಲು `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಸಮಾವೇಶ ಜೂ. 7ರ ಮಧ್ಯಾಹ್ನ 1ಕ್ಕೆ ಪುರಭವನದಲ್ಲಿ ನಡೆಯಲಿದೆ.
ಕೇಂದ್ರ ಸಚಿವ ಪಿ.ಪಿ. ಚೌಧರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಬಿಜೆಪಿ ಪದಾಧಿಕಾರಿಗಳಾದ ಶಾರದಾ ರೈ, ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ವೇದವ್ಯಾಸ ಕಾಮತ್, ಕಿಶೋರ್ ರೈ ಭಾಗವಹಿಸುವರು ಎಂದರು.
Click this button or press Ctrl+G to toggle between Kannada and English