ಯೆಚೂರಿಯವರ ಮೇಲೆ ಹಲ್ಲೆ ಪ್ರಜಾಪ್ರಭುತ್ವಕ್ಕೆ ಸವಾಲಾಗಿದೆ : ಶ್ರೀಯಾನ್

7:12 PM, Friday, June 9th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

cpim-yechuri ಮಂಗಳೂರು : ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿಯವರ ಮೇಲೆ ಹಲ್ಲೆ ಯತ್ನವನ್ನು  ಖಂಡಿಸಿ ಸಿಪಿಎಂ ಕೇಂದ್ರ ಸಮಿತಿ ನೀಡಿದ ಕರೆಯ ಮೇರೆಗೆ ಗುರುವಾರ ಪ್ರತಿಭಟನಾ ಪ್ರದರ್ಶನ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಆರ್. ಶ್ರೀಯಾನ್, ಏಕಸಂಸ್ಕೃತಿ, ಏಕರಾಷ್ಟ್ರ ಎಂಬ ಪರಿಕಲ್ಪನೆಯನ್ನು ಹುಟ್ಟು ಹಾಕಿ, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಜಾತ್ಯಾತೀತ ತತ್ವಕ್ಕೆ ಸಂಘಪರಿವಾರ ಕೊಡಲಿಪೆಟ್ಟು ನೀಡುತ್ತಿದೆ. ಸಿಪಿಎಂ ಕಚೇರಿಗೆ ನುಗ್ಗಿದ ಸಂಘಪರಿವಾರದ ಗೂಂಡಾಗಳು ಸಿಪಿಎಂ ರಾಷ್ಟ್ರ ನಾಯಕ ಸೀತಾರಾಮ ಯೆಚೂರಿಯವರ ಮೇಲೆ ಹಲ್ಲೆಗೆ ಮುಂದಾಗಿರುವುದು ಪ್ರಜಾಪ್ರಭುತ್ವಕ್ಕೆ ಸವಾಲಾಗಿದೆ ಎಂದು ಹೇಳಿದರು.

ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೆ ದೇಶಾದ್ಯಂತ ಅನೇಕ ವಿದ್ವಂಸಕ ಕೃತ್ಯಗಳನ್ನು ನಡೆಸಿ ಕೋಮುಗಲಭೆಗಳನ್ನು ಸೃಷ್ಟಿಸಿ ಸಾವಿರಾರು ಜನರ ಮಾರಣ ಹೋಮ ನಡೆಸಿದ ಆರ್ ಎಸ್ ಎಸ್ ನಿಜಕ್ಕೂ ದೇಶದ ಭಯೋತ್ಪಾದಕ ಸಂಘಟನೆ ಹಾಗೂ ದೇಶದ್ರೋಹಿ ಸಂಘಟನೆಯಾಗಿದೆ ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ. ಯಾದವ ಶೆಟ್ಟಿ ಮಾತನಾಡಿ, ಸೀತಾರಾಮ ಯೆಚೂರಿಯವರಂತಹ ನಾಯಕರ ಮೇಲೆ ದಾಳಿ ನಡೆಸುವುದು ಆರ್ ಎಸ್ ಎಸ್ ನ ದಿವಾಳಿಕೋರತನವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ಕೋಮುಗಲಭೆ ನಡೆಸಿ ಅಮಾಯಕ ಯುವಕರನ್ನು ಬಲಿ ಕೊಟ್ಟಿದ್ದೇ ಕೇಸರಿ ಬಾವುಟದ ಚರಿತ್ರೆ ಎಂದು ಹೇಳಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಂಗಳೂರಿನ ನಿವೃತ್ತ ಪೊಲೀಸ್ ಅಧಿಕಾರಿ ಟಿ.ಸಿ.ಎಂ. ಶರೀಫ್ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಸಿಪಿಎಂ ಜಿಲ್ಲಾ ಮುಖಂಡರಾದ ಕೃಷ್ಣಪ್ಪ ಸಾಲಿಯಾನ್, ಪದ್ಮಾವತಿ ಶೆಟ್ಟಿ, ಜಯಂತ ನಾಯ್ಕಿ, ಜಯಂತಿ ಶೆಟ್ಟಿ, ರಾಮಣ್ಣ ವಿಟ್ಲ, ರಮಣಿ ಮೂಡಬಿದ್ರಿ, ಸದಾಶಿದಾಸ್, ಸತೀಶನ್, ಹರಿದಾಸ್, ವಾಸುದೇವ ಉಚ್ಚಿಲ, ಕೃಷ್ಣಪ್ಪ ಕೊಂಚಾಡಿ, ಸಂತೋಷ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English