ಮಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ದೇವರಗುಂಡದ ಡಿ.ವಿ.ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿ ಅಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಬಜಪೆ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:30ಕ್ಕೆ ಬಂದಿಳಿದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಜಿಲ್ಲಾಡಳಿತದ ಆಧಿಕಾರಿಗಳು ಸ್ವಾಗತಿಸಿದರು.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಈ ಹಿಂದೆ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದಾಗಿ ಭರವಸೆ ನೀಡಿದ ಅವರು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವಲ್ಲಿ ಕಾರ್ಯ ನಿರ್ವಹಿಸುವುದಾಗಿ ಹೇಳಿದರು. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದರು.
ವಿರೋಧ ಪಕ್ಷ ಸೇರಿದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಲಿದ್ದೇನೆ. ಉತ್ತಮ ಕಾರ್ಯನಿರ್ವಹಣೆಯೇ ಸರಕಾರದ ಗುರಿಯಾಗಿದ್ದು, ಇದಕ್ಕಾಗಿ ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದಿದ್ದಾರೆ.
ನೂತನ ಮುಖ್ಯಮಂತ್ರಿ ಜೊತೆ ಪತ್ನಿ ಡಾಟಿ,ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ.ಪಾಲೆಮಾರ್,ಸಂಸದ ನಳಿನ್ಕುಮಾರ್ ಕಟೀಲ್ ವೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English
December 15th, 2011 at 06:08:35
cQXmZJ epbetbghaioz, [url=http://cdmbldthliaf.com/]cdmbldthliaf[/url], [link=http://gquthkpimyal.com/]gquthkpimyal[/link], http://rwmgtcijvpgn.com/