ಕೃಷ್ಣಮಠದ ಆವರಣದಲ್ಲಿ ಮುಸ್ಲಿಮರಿಗೆ ನಮಾಝ್ ಸಲ್ಲಿಸಲು ಅವಕಾಶ ನೀಡಿದ್ದು ಸರಿಯಲ್ಲ : ಮುತಾಲಿಕ್

11:25 PM, Monday, June 26th, 2017
Share
1 Star2 Stars3 Stars4 Stars5 Stars
(No Ratings Yet)
Loading...

Muthalik ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜೂ. 24ರಂದು ಆಯೋಜಿಸಲಾಗಿದ್ದ ಇಫ್ತಾರ್ ಕೂಟವನ್ನು ವಿರೋಧಿಸಿ ಶ್ರೀರಾಮಸೇನೆ ಜು.2ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಶ್ರೀರಾಮಸೇನೆಯ ಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ರೊಂದಿಗೆ ಸೋಮವಾರ ಬೆಳಗ್ಗೆ ಉಡುಪಿಗೆ ಧಾವಿಸಿ ಬಂದು ಚರ್ಚೆ ನಡೆಸಿ ವಿಫಲರಾಗಿದ್ದ ಮುತಾಲಿಕ್, ಅನಂತರ ಸೇನೆಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಸಂಜೆ ಸುದ್ದಿಗಾರರಿಗೆ ತಿಳಿಸಿದರು.

ಸ್ವಾಮೀಜಿ ಸಮಾಜಕ್ಕೆ ಶ್ರೀಮಠದಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸುವ ಮೂಲಕ ತಪ್ಪು ಸಂದೇಶವನ್ನು ರವಾನಿಸಿದ್ದಾರೆ. ಇದರಿಂದ ಇಡೀ ಹಿಂದು ಸಮಾಜಕ್ಕೆ ಅವಮಾನವಾಗಿದೆ. ಗೋಮಾಂಸ ಭಕ್ಷಕರಿಗೆ ಮಠದ ಆವರಣಕ್ಕೆ ಪ್ರವೇಶ ನೀಡಿದ್ದು ಹಾಗೂ ನಮಾಝ್ ಸಲ್ಲಿಸಲು ಅವಕಾಶ ನೀಡಿದ್ದು ಸಹ್ಯವಲ್ಲ. ಇದನ್ನು ವಿರೋಧಿಸಿ ಜು.2ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಪ್ರಮೋದ್ ಮುತಾಲಿಕ್ ಸುದ್ದಿಗಾರರಿಗೆ ತಿಳಿಸಿದರು. ಯಾವ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು ಎಂಬುದರ ಕುರಿತು ಮುಂದೆ ಯೋಚಿಸಿ ನಿರ್ಧರಿಸಲಾಗುವುದು ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English