ಮಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ ರಾಜ್ಯ ರೈತ ಸಂಘದ ಸತತ ಹೋರಾಟದ ಫಲವಾಗಿ ಸರಕಾರವು ರೈತರ ಬೆಲೆ ಸಾಲದಲ್ಲಿ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹ. ಪ್ರಸ್ತುತ ಹಿಂಗಾರು ಮತ್ತು ಮುಂಗಾರು ಬೆಳೆಗಳಲ್ಲಿ ನಷ್ಟ ಸಂಭವಿಸಿದ್ದು, ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಅದನ್ನು ಮನ್ನಾ ಮಾಡಬೇಕು ಮತ್ತು ಪ್ರಸಕ್ತ ಸಾಲಿಗೆ ಹೊಸ ಸಾಲ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ರೈತ ಸಂಘದ ಮುಖಂಡರಾದ ತಾರನಾಥ ಗೌಡ, ರೂಪೇಶ್ ರೈ, ಮಂಜುನಾಥ ರೈ ಪರಾರಿ, ಪ್ರಸಾಧ್ಯ ಶೆಟ್ಟಿ ಪೆರಾಬೆ, ಯಾದವ ಶೆಟ್ಟಿ, ವಾಸುದೇವ ಉಚ್ಚಿಲ್ ಮತ್ತಿತರರಿದ್ದರು.
Click this button or press Ctrl+G to toggle between Kannada and English