ಮಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ (28) ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಶರತ್ ಜುಲೈ 4 ರಂದು ಬಿ.ಸಿ.ರೋಡ್ನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದರು.
ಶರತ್ ಬಿ.ಸಿ.ರೋಡ್ನ ತನ್ನ ಲಾಂಡ್ರಿಯಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಅಪರಿಚಿತರ ತಂಡವೊಂದು ಅಂಗಡಿಗೆ ನುಗ್ಗಿ ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರ ಅಂತಿಮ ಸಂಸ್ಕಾರ ಶನಿವಾರ ಬೆಳಿಗ್ಗೆ ಸಜಿಪಮುನ್ನೂರಲ್ಲಿ ನಡೆಯಲಿದೆ.
Click this button or press Ctrl+G to toggle between Kannada and English