ಮಂಗಳೂರಲ್ಲಿ ಶಾಂತಿ ಸಭೆಗೆ ಬಿಜೆಪಿ ಬಹಿಷ್ಕಾರ

12:26 PM, Thursday, July 13th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Yedyurapp Airport ಮಂಗಳೂರು:  ಸರ್ಕಾರ ಕರೆದಿರುವುದು ಯಾರ ಶಾಂತಿ ಸಭೆ? ಕಾಂಗ್ರೆಸ್‌ನವರ ಶಾಂತಿ ಸಭೆಯಾ? ಕೋಮು ಗಲಭೆಯನ್ನು ಹುಟ್ಟು ಹಾಕಿದವರ ನೇತೃತ್ವದಲ್ಲೇ ಸಭೆ ನಡೆಯುತ್ತಿದೆ. ಯಾರು ಬಲಿಯಾಗಿದ್ದಾರೋ ಆ ಸಂಘಟನೆಗೆ ಆಹ್ವಾನ ಇಲ್ಲ. ಹಿಂದೂ ಸಂಘಟನೆಗಳಿಗೆ ಯಾಕೆ ಆಹ್ವಾನ ನೀಡಿಲ್ಲ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಂತಿ ಸಭೆಗೆ ಹಾಜರಾಗುವ ಪ್ರಶ್ನೆಯೇ ಇಲ್ಲ, ಎಸ್‌ಡಿಪಿಐ ನಂತಹ ಸಂಘಟನೆಗೆ ಆಹ್ವಾನ ನೀಡಲಾಗಿದೆ. ಇದು ಕೇವಲ ರಮಾನಾಥ ರೈ ಬೆಂಬಲಿಗರು, ಕಾಂಗ್ರೆಸ್ ಸಭೆಯಾ? ಅದಕ್ಕೆ ನಾವು ಹೋಗಬೇಕಾ? ಜಿಲ್ಲೆಯಲ್ಲಿ ಸ್ಪರ್ಧಿಸುವ ರಮಾನಾಥ್ ರೈ ಸವಾಲನ್ನು ಸ್ವೀಕರಿಸಿದ್ದೇನೆ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇವೆ. ಅದಕ್ಕೆ ಇಂದಿನಿಂದ ಮೂರು ದಿನ ವಿಸ್ತಾರಕನಾಗಿ ಕೆಲಸ ಮಾಡುತ್ತೇನೆ. ರಮಾನಾಥ ರೈ ಅವರಿಗೆ ಸ್ವಲ್ಪ ವಿಶ್ರಾಂತಿ ಕೊಡಬೇಕು ಅಂತ ತೀರ್ಮಾನ ಮಾಡಿದ್ದೇವೆ ಎಂದು ಯಡಿಯೂರಪ್ಪ ಹರಿಹಾಯ್ದರು.

ಶರತ್ ಹತ್ಯೆ ನಡೆದು 9 ದಿನ ಆದ ಮೇಲೆ ಯಾರಿಗೂ ಹೇಳದೇ ರಮಾನಾಥ ರೈ ಶರತ್ ಮನೆಗೆ ಹೋಗಿದ್ದರು. ನಾವೆಲ್ಲಾ ಬಂದ ಮೇಲೆ ಅವರಿಗೆ ಜ್ಞಾನೋದಯ ಆಗಿದೆ. ಅದು ಅವರ ವಯಸ್ಸಿನ ಕಾರಣವೋ, ಉದ್ದೇಶ ಪೂರ್ವಕವೋ ಗೊತ್ತಿಲ್ಲ. ರಾಜಕಾರಣಿಗಳ ಶಬ್ದ ಪ್ರಯೋಗದ ಬಗ್ಗೆ ನಾನು ಪ್ರತಿಕ್ರಿಯಿಸಲು ಇಷ್ಟಪಡಲ್ಲ ಎಂದರು.

ಕೊಲೆಯಾದ ಶರತ್ ಮನೆಗೆ ಭೇಟಿ ಕೊಡುವ ಉದ್ದೇಶದಿಂದ ನಾನು ಮಂಗಳೂರಿಗೆ ಬಂದಿದ್ದೇನೆ. ಇದು ವ್ಯವಸ್ಥಿತ ಕೊಲೆ ಸಂಚು, ಸಿಎಂ ಕಾರ್ಯಕ್ರಮಕ್ಕಾಗಿ ಸಾವನ್ನು ಮುಚ್ಚಿಟ್ಟಿದ್ದು ಅಕ್ಷಮ್ಯ ಅಪರಾಧವೆಂದು ಬಿಎಸ್‌ವೈ ವಾಗ್ದಾಳಿ ನಡೆಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English