ಖಾಸಗಿ ಆ್ಯಂಬುಲೆನ್ಸ್ ಚಾಲಕರಿಗೆ ಸೂಕ್ತ ಮೂಲಭೂತ ಸೌಕರ್ಯಬೇಕು : ಯೋಗೀಶ್ ಶೆಟ್ಟಿ,

8:52 PM, Monday, July 17th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

TRVಮಂಗಳೂರು : ತುಳುನಾಡ ರಕ್ಷಣಾ ವೇದಿಕೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸರಕಾರಿ ಮತ್ತು ಖಾಸಗಿ ಆ್ಯಂಬುಲೆನ್ಸ್ ಚಾಲಕರಿಗೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಎದುರುಗಡೆ ಸೋಮವಾರ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ  ಮಾತನಾಡಿದ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ, ರೋಗಿಗಳ ಸೇವೆಗಾಗಿ ಕರ್ತವ್ಯ ನಿರ್ವಹಿಸುವ ಆ್ಯಂಬುಲೆನ್ಸ್ ಚಾಲಕರು ಜಿಲ್ಲಾಸ್ಪತ್ರೆ ವೆನ್ಲಾಕ್  ಹಾಗೂ ಇತರೆಡೆಗಳಲ್ಲಿ  ತಂಗುದಾಣ, ಮೂಲಭೂತ ಸೌಕರ್ಯಗಳಾದ ಶೌಚಾಲಯ ಹಾಗೂ ಸ್ನಾನಗೃಹದ ಸೌಲಭ್ಯಗಳಿಲ್ಲದೆ  ಕಷ್ಟ ಪಡುತ್ತಿದ್ದಾರೆ ಅವರಿಗೆ ಈ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ವೆನ್ಲಾಕ್ ಆಸ್ಪತ್ರೆಯ ಹೊರಗಡೆ ಸಾರ್ವಜನಿಕರು ಕಸಕಡ್ಡಿಗಳನ್ನು ಎಸೆಯುತ್ತಾರೆ, ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ಇಲ್ಲಿ ಸೊಳ್ಳೆ ಉತ್ಪತ್ತಿ ತಾಣವಾಗಿ ಪರಿಣಮಿಸಿದೆ. ಜಿಲ್ಲಾಡಳಿತವು ತಕ್ಷಣ ಈ ಪ್ರದೇಶದಲ್ಲಿ ಶುಚಿತ್ವ ಹಾಗೂ ನೈರ್ಮಲ್ಯ ಕಾಪಾಡಲು ಕ್ರಮ ಜರಗಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾವೇರಿ ಆ್ಯಂಬುಲೆನ್ಸ್ ಮಾಲಕಿ ಸಿ.ಎಸ್.ರಾಧಿಕಾ ಮಾತನಾಡಿ,  ರಾತ್ರಿ ವೇಳೆ ತಮ್ಮ ವಾಹನಗಳಲ್ಲೇ ಮಲಗುವ ಚಾಲಕರು ಹಣ ಪಾವತಿಸಿ ಶೌಚಾಲಯಗಳನ್ನು ಬಳಸಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯು ಇವರ ಸಮಸ್ಯೆಗಳತ್ತ ಗಮನಹರಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಎಂ.ಸಿರಾಜ್, ಕೋಶಾಧಿಕಾರಿ ಅಬ್ದುಲ್ ರಶೀದ್ ಜಪ್ಪು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಬಂಗೇರ, ಕಾರ್ಯದರ್ಶಿ ಆನಂದ್ ಆಮೀನ್ ಅಡ್ಯಾರ್ ಮತ್ತಿತರು ಪಾಲ್ಗೊಂಡಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English