ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಸಂಪೂರ್ಣವಾಗಿ ಜಲಾವೃತ

8:50 PM, Wednesday, July 19th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

subrahmanya ಮಂಗಳೂರು :  ನಿರಂತರವಾಗಿ  ಸುರಿಯುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಸಂಪೂರ್ಣವಾಗಿ ಜಲಾವೃತವಾಗಿದ್ದು, ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನದಿಯ ಮೇಲ್ಭಾಗದಲ್ಲಿ ತೀರ್ಥ ಸ್ನಾನ ಪೂರೈಸುತ್ತಿದ್ದಾರೆ.

ಕರ್ನಾಟಕ ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿದೆ ಭಾರೀ ಮಳೆ ಅಲ್ಲದೆ ಘಟ್ಟ ಪ್ರದೇಶದಲ್ಲಿ ಇದೇ ರೀತಿ ನಿರಂತರ ಮಳೆಯಾದರೆ ಕುಮಾರಧಾರಾ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಸೇತುವೆ ಮಟ್ಟದಲ್ಲಿ ನದಿ ನೀರು ಹರಿಯುತ್ತಿದೆ

ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ಪಂಜ, ಬಳ್ಪ, ನಿಂತಿಕಲ್ ಮೊದಲಾದೆಡೆ ನಿರಂತರ ಮಳೆಯಾದುದರಿಂದ ಈ ಪರಿಸರದಲ್ಲಿ ಹರಿಯುವ ನದಿ, ತೊರೆಗಳು ತುಂಬಿ ಹರಿಯುತ್ತಿವೆ.

ನದಿಗಳು ತುಂಬಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ತೋಟಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ಕೃಷಿಕರಿಗೆ ನಷ್ಟ ಉಂಟಾಗಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಜನರು ತತ್ತರಿಸಿದ್ದಾರೆ. ದಕ್ಷಿಣಕನ್ನಡ, ಉಡುಪಿ ಹಾಗೂ ಕಾಸರಗೋಡಿನಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಾಗಿದ್ದು, ಮಳೆ ಹೀಗೇ ಮುಂದುವರಿದಲ್ಲಿ ನದಿ ಪಾತ್ರಗಳಲ್ಲಿ ನೆರೆಯ ಪರಿಸ್ಥಿತಿಯೂ ನಿರ್ಮಾಣವಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನ ಮಳೆಯು ಇದೇ ರೀತಿಯಲ್ಲಿ ಮುಂದುವರಿಯಲಿದೆ ಎನ್ನುವ ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English