ಮಂಗಳೂರು : ಶರತ್ ಮಡಿವಾಳ ಹತ್ಯೆಯಾಗಿ ಇಂದಿಗೆ ಹದಿನೈದು ದಿನಗಳಾಗಿವೆ. ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಹಂತಕರ ಬಂಧನಕ್ಕಾಗಿ ಪ್ರತಿಭಟನೆ ನಡೆಸಿದ್ದರು. ಹಾಗೆಯೇ ಶುಕ್ರವಾರ ಸಚಿವ ರಮಾನಾಥ್ ರೈ ವಿಶೇಷ ಪೂಜೆ ಸಲ್ಲಿಸಿದರು. ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಆರೋಪಿಗಳು ಶೀಘ್ರವೇ ಬಂಧನವಾಗಲಿ ಎಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಅವರು ಈ ಸಂದರ್ಭ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು.
“ಶರತ್ ಮಡಿವಾಳ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇದರ ಹಿಂದಿರುವ ಪಿತೂರಿದಾರರ ಬಂಧನವಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರಿಗೆ ದೇವರು ಸದ್ಬುದ್ಧಿ ಕೊಡಲಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಶ್ವತ ಶಾಂತಿ ನೆಲೆಸಲಿ,” ಎಂದು ರಮಾನಾಥ ರೈ ದೇವರಲ್ಲಿ ಪ್ರಾರ್ಥಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮೊಡಂಕಾಪು ಗ್ರಾಮದ ಇನ್ಫೆಂಟ್ ಬಿಶಪ್ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ತುಂಬೆ ಪ್ರಕಾಶ್ ಶೆಟ್ಟಿ, ಪದ್ಮ ಶೇಖರ್ ಜೈನ್,ಸಂಜೀವ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.ಆ ಬಳಿಕ ಸಚಿವರು ಉದ್ದಬೆಟ್ಟು ದರ್ಗಾಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
Click this button or press Ctrl+G to toggle between Kannada and English