4 ಲಕ್ಷ ಮೌಲ್ಯದ ಮರದ ದಿಮ್ಮಿಗಳನ್ನು ವಶಪಡಿಸಿದ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು

1:07 PM, Friday, July 28th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

forest ಬಂಟ್ವಾಳ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ಕಡಂಬು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ತಾಲೂಕಿನ ವಿಡ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಸಾಲೆತ್ತೂರು ಬಾರೆಬೆಟ್ಟು ನಿವಾಸಿ ಮಹಮ್ಮದ್ ಮುಸ್ತಾಫ ಅವರಿಗೆ ಸೇರಿದ ಲಾರಿಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳ ತಂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.  ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 4 ಲಕ್ಷ ವೆಂದು ಅಂದಾಜಿಸಲಾಗಿದೆ.

ಕಾರ‍್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಬಿ. ಸುರೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್, ಅರಣ್ಯ ರಕ್ಷಕರಾದ ವಿನಯ ಕುಮಾರ್, ಜಿತೇಶ್ ಪಿ, ದೇಜಪ್ಪ ಹಾಗೂ ಸಿಬಂದಿ ಪ್ರವೀಣ್, ಜಯರಾಮ್ ಪಾಲ್ಗೊಂಡಿದ್ದರು. ಮುಂದಿನ ತನಿಖೆಯನ್ನು ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಬಾಬಾ ರೈಯವರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕರಿಕಾಳನ್ ಅವರ ಮಾರ್ಗದರ್ಶನದಂತೆ ನಡೆಸಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English