ಮಂಗಳೂರು : ಸಿಐಡಿ ತನಿಖೆಗೆ ಶ್ರೀರಾಮಸೇನೆ ಆಗ್ರಹ ಕಾವ್ಯಾಳ ಸಂಶಯಾಸ್ಪದ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಮತ್ತು ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಶನಿವಾರ ಜಿಲ್ಲಾಧಿಕಾರಿಗೆ ಮನವಿ ನೀಡಿತು. ಜಿಲ್ಲಾಧಿಕಾರಿ ಪರವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಮನವಿ ಸ್ವೀಕರಿಸಿದರು.
ಮೃತ ಕಾವ್ಯಾಳ ಕುಟುಂಬದವರಿಗೆ ನ್ಯಾಯ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವಂತೆ ಹಾಗೂ ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಧನ ಒದಗಿಸುವಂತೆ ಶ್ರೀರಾಮ ಸೇನೆ ಮನವಿಯಲ್ಲಿ ಆಗ್ರಹಿಸಿದೆ.
ಕಟೀಲು ದೇವರಗುಡ್ಡೆಯ ನಿವಾಸಿಗಳಾದ ಲೋಕೇಶ್ ಮತ್ತು ಬೇಬಿ ದಂಪತಿಯ ಏಕೈಕ ಪುತ್ರಿ ಕಾವ್ಯಾ ಒಂದೂವರೆ ತಿಂಗಳಿನಿಂದ ಮೂಡಬಿದ್ರೆಯ ಆಳ್ವಾಸ್ ನಲ್ಲಿ ಲವಲವಿಕೆಯಿಂದ ಎಲ್ಲಾ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಅವಳ ಸಾವು ಆಕೆಯ ಸಹಪಾಠಿಗಳಿಗೆ ಅನುಮಾನ ಉಂಟು ಮಾಡಿದೆ ಎಂದರು.
Click this button or press Ctrl+G to toggle between Kannada and English