ಮಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪ ಆಳ್ವಾಸ್ ಹೈಸ್ಕೂಲ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮೂಡಬಿದ್ರೆಯ ಪುತ್ತಿಗೆಯಲ್ಲಿರುವ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.
ಆಳ್ವಾಸ್ ನ ಕಾವ್ಯ ನಿಗೂಢ ಸಾವಿನ ತನಿಖೆ ಕೈಗೆತ್ತಿಕೊಂಡ ಮಕ್ಕಳ ಆಯೋಗ ಭೇಟಿ ಸಂದರ್ಭ ಅಳ್ವಾಸ್ ಹಾಸ್ಟೆಲ್ ಸಿಬ್ಬಂದಿ, ಕಾವ್ಯ ಪೂಜಾರಿಯ ಆಪ್ತ ಸ್ನೇಹಿತರು ಹಾಗೂ ದೈಹಿಕ ಶಿಕ್ಷಕರನ್ನು ಉಗ್ರಪ್ಪ ವಿಚಾರಣೆ ಕೂಡ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಹಾಗೂ ಜಿಲ್ಲಾಧಿಕಾರಿ ಕೆಜಿ ಜಗದೀಶ್ ಉಗ್ರಪ್ಪ ಅವರಿಗೆ ಸಾಥ್ ನೀಡಿದರು. ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಪ್ರಕರಣದ ವಿವಾದಕ್ಕೆ ಗುರಿಯಾಗಿದೆ.
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿದ್ದ 15 ವರ್ಷದ ಕಾವ್ಯ ಜುಲೈ 20ರಂದು ಕಾಲೇಜಿನ ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೋಷಕರಿಗೆ ಸಂಸ್ಥೆಯಿಂದ ತಿಳಿಸಲಾಗಿತ್ತು.
Click this button or press Ctrl+G to toggle between Kannada and English