ಮಂಗಳೂರು : ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ಆದಾಯ ತೆರಿಗೆ ದಾಳಿಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಎ. ಸಿ. ವಿನಯರಾಜ್ ನೇತೃತ್ವದಲ್ಲಿ ಮಂಗಳೂರು ಆದಾಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಡಿಕೆಶಿ ಅವರ ಮೇಲೆ ದಾಳಿಗೆ ಬಿಜೆಪಿಯ ಪಿತೂರಿ ಎಂದು ಆರೋಪಿಸಿದ ಅವರು ಆದಾಯ ಕಚೇರಿಯ ಕಿಟಕಿ ಗಾಜುಗಳನ್ನು ಪುಡಿ-ಪುಡಿ ಮಾಡಿದರು.
ಬಳಿಕ ಕಚೇರಿ ಒಳಕ್ಕೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಮಂಗಳೂರು ದಕ್ಷಿಣ ಪೊಲೀಸರು ತಡೆದು ಹೊರಕ್ಕೆ ಕಳುಹಿಸಿದರು. ನಂತರ ಅಲ್ಲಿಂದ ತೆರಳಿದ ಪ್ರತಿಭಟನಾಕಾರರು, ಎದುರಿನ ರಸ್ತೆಯಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
Click this button or press Ctrl+G to toggle between Kannada and English