- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೇರಳದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಮನವಿ

bhoopendra [1]ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರನ್ನು ಭೇಟಿ ಮಾಡಿದ ರಾಜ್ಯ ಸಂಸದರ ನಿಯೋಗ, ಕರ್ನಾಟಕ, ಕೇರಳ ರಾಜ್ಯಗಳಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಮನವಿ ಮಾಡಿತು.

ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಸುರೇಶ್ ಗೋಪಿ ಹಾಗೂ ರಿಚರ್ಡ್ ಅವರನ್ನು ಒಳಗೊಂಡ ನಿಯೋಗವು, ಮಂಗಳವಾರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿತು.

ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ನಡೆದಿರುವ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಎಲ್ಲ ಕೊಲೆಗಳ ಬಗ್ಗೆ ರಾಜ್ಯ ಸರ್ಕಾರಗಳಿಂದ ವರದಿ ತರಿಸಿಕೊಳ್ಳಬೇಕು. ಅಪರಾಧಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ ರಾಜ್ಯದಲ್ಲಿನ ಅಶಾಂತಿ ವಾತಾವರಣವನ್ನು ಶಾಂತಗೊಳಿಸಲು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿತು.

ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಿನ್ನೆಲೆಯಲ್ಲಿ ಪಿಎಫ್ಐ, ಕೆಎಫ್‌ಡಿ ಹಾಗೂ ಎನ್‌ಡಿಎಫ್ ಸಂಘಟನೆಗಳನ್ನು ನಿಷೇಧಿಸಬೇಕು. ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆಯೂ ಗೃಹ ಸಚಿವರನ್ನು ಆಗ್ರಹಿಸಿದರು.

ಕೇರಳದಲ್ಲಿ ಕಮ್ಯುನಿಸ್ಟ್‌ ಪಕ್ಷವು ಹಿಂದೂ ಸಂಘಟನೆಗಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ, ಹತ್ಯೆ ಮಾಡುತ್ತಿದೆ. ರಾಜಕೀಯ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಮನವಿಯಲ್ಲಿ ಕೋರಿದರು.