ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್‌ರವರ 137ನೆ ಜನ್ಮ ದಿನಾಚರಣೆ

9:08 PM, Friday, August 4th, 2017
Share
1 Star2 Stars3 Stars4 Stars5 Stars
(No Ratings Yet)
Loading...

SCDCC-BANKಮಂಗಳೂರು : ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮೊಳಹಳ್ಳಿ ಶಿವರಾವ್ ಸಭಾಂಗಣದ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್‌ರವರ 137ನೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್  ಉದ್ಘಾಟಿಸಿದರು.

ಸಹಕಾರಿ ಕ್ಷೇತ್ರದಲ್ಲೂ ನಗದುರಹಿತ ವ್ಯವಹಾರಕ್ಕೆ ಸಿದ್ಧತೆ ನಡೆಸಲಾಗಿದೆ,  ಸಹಕಾರಿ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್‌ರವರು ಸಹಕಾರ ವ್ಯವಸ್ಥೆಯ ಮೂಲಕ ಆರ್ಥಿಕ ಕ್ಷೇತ್ರದಲ್ಲಿ ಬದಲಾವಣೆಗೆ ಕಾರಣರಾದರು. ಇದರಿಂದಾಗಿಯೇ ವಾಣಿಜ್ಯ ಬ್ಯಾಂಕ್‌ಗಳ ನಡುವಿನ ಪೈಪೋಟಿಯ ಹೊರತಾಗಿಯೂ ಸಹಕಾರಿ ಬ್ಯಾಂಕುಗಳು ಉತ್ಕೃಷ್ಟವಾದ ಸೇವೆಯನ್ನು ಒದಗಿಸುವ ಮೂಲಕ ತಮ್ಮ ಸ್ಥಾನವನ್ನು ಉಳಿಸಿಕೊಂಡಿವೆ. ಆದ್ದರಿಂದ ಸಹಕಾರಿ ಕ್ಷೇತ್ರಗಳು ಕೇವಲ ಬಡ್ಡಿ ಆದಾಯದ ಗುರಿಯನ್ನು ಇರಿಸದೆ, ಇತರ ವ್ಯವಹಾರಗಳತ್ತ ಗಮನ ಹರಿಸಬೇಕು ಎಂದು ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ. ಶೇಖರ ಗೌಡ ಮಾಲಿ ಪಾಟೀಲ ಮಾತನಾಡಿ, ಸರಕಾರ ಸಾಲ ಮನ್ನಾ ಮಾಡುವ ವೇಳೆ ಸಂಪೂರ್ಣವಾಗಿ ಬಡ್ಡಿ ಮೊತ್ತ, ಸಾಲದ ಮೊತ್ತವನ್ನು ಕ್ಲಪ್ತ ಕಾಲದಲ್ಲಿ ಸಹಕಾರಿ ಬ್ಯಾಂಕ್‌ಗಳಿಗೆ ಜಮಾ ಮಾಡುವ ಕಾರ್ಯ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.

SCDCC-BANKಕರ್ನಾಟಕ ರಾಜ್ಯ ಸಹಾರ ಮಹಾಮಂಡಲಗಳ ನಿಯಮಿತ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಕಾರಿ ಸಂಘಗಳು ಪ್ರಸಕ್ತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚಿಂತನಾ ಸಭೆಯನ್ನು ಆಯೋಜಿಸಲಾಗಿತ್ತು.
ವೇದಿಕೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ, ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ನಿರಂಜನ ರೈ, ಸದಾಶಿವ ಉಳ್ಳಾಲ್, ಶಶಿಕುಮಾರ್ ರೈ, ಸಿಇಒ ಸತೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English