ಮಂಗಳೂರು : ಐದು ವರ್ಷಗಳಲ್ಲಿ ರಾಜ್ಯದಲ್ಲಿ ದಕ್ಷ , ಭ್ರಷ್ಟಚಾರರಹಿತ ಹಾಗೂ ಜನಪರ ಆಡಳಿತ ನೀಡಿ ಜನಮೆಚ್ಚುಗೆಗೆ ಪಾತ್ರವಾಗಿರುವ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೇರಿಸುವಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಜಿಲ್ಲಾ ಘಟಕದ ಸಭೆಯನ್ನುದ್ದೇಶಿಸಿ ಮಾತನಾಡಿದ ಖಾದರ್, ಕಾಂಗ್ರೆಸ್ ಸರಕಾರದ ಮೇಲೆ ಕಳಂಕ ತರಲು ಪ್ರತಿಪಕ್ಷ ಬಿಜೆಪಿ ಪ್ರಯತ್ನಿಸುತ್ತಿದೆ, ವಿಪಕ್ಷಗಳ ಅಪಪ್ರಚಾರಗಳನ್ನು ವಿಫಲಗೊಳಿಸುವ ಕಾರ್ಯವನ್ನು ಕಾರ್ಯಕರ್ತರು ಸಮರ್ಥವಾಗಿ ನಿಭಾಯಿಸಬೇಕು ಎಂದು ಅವರು ಹೇಳಿದರು.
ಇಂಧನ ಸಚಿವ ಡಿಕೆಶಿ ಅವರ ಮೇಲಿನ ಐಟಿ ದಾಳಿ ಪ್ರತಿಪಕ್ಷದ ಪಿತೂರಿಯಿಂದ ನಡೆದಿದೆ. ಒಗ್ಗಟಿನಿಂದ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದ್ದರು .
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ದ.ಕ.ಜಿಲ್ಲಾ ಉಸ್ತುವಾರಿ ಯು.ಬಿ.ವೆಂಕಟೇಶ್, ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ಅರುಣ್ ಮಾಚಯ್ಯ, ರಾಜ್ ಕುಮಾರ್, ಸವಿತಾ ರಮೇಶ್, ಐವನ್ ನಿಗ್ಲಿ , ವಿಧಾನಪರಿಷತ್ ಚುನಾವಣೆ ಅಭ್ಯರ್ಥಿ ಎಸ್.ಪಿ.ದಿನೇಶ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮೇಯರ್ ಕವಿತಾ ಸನಿಲ್, ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಗೇರು ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮುಖಂಡರಾದ ಬಿ.ಇಬ್ರಾಹಿಂ, ಕಳ್ಳಿಗೆ ತಾರನಾಥ ಶೆಟ್ಟಿ, ಬಲರಾಜ ರೈ, ಶಶಿಧರ ಹೆಗ್ಡೆ , ಮಮತಾ ಗಟ್ಟಿ , ಶಾಲೆಟ್‌ಪಿಂಟೋ, ನವೀನ್ ಡಿಸೋಜ, ಸಂತೋಷ್ ಕುಮಾರ್ ಶೆಟ್ಟಿ , ಎಂ.ಎಸ್.ಮಹಮ್ಮದ್, ಸದಾಶಿವ ಉಳ್ಳಾಲ್, ಶೇಖರ್ ಕುಕ್ಕೇಡಿ, ನಜೀರ್ ಬಜಾಲ್, ಸೇವಾದಳದ ಅಶ್ರ್ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English