ಮಂಗಳೂರು : ನೂತನ ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಬುಧವಾರ ಅಧಿಕಾರ ಸ್ವೀಕರಿಸಿದರು. ಪಶ್ಚಿಮ ವಲಯ ಐಜಿಪಿಯಾಗಿದ್ದ ಹರಿಶೇಖರನ್ ಅವರು ನೂತನ ಐಜಿಪಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಈ ಸಂದರ್ಭ ಮಾತನಾಡಿದ ಹೇಮಂತ್ ನಿಂಬಾಳ್ಕರ್, ಪೊಲೀಸ್ ಇಲಾಖೆ ಇರುವುದೇ ಸಾಮಾನ್ಯ ಜನರ ಸೇವೆ ಮಾಡುವುದಕ್ಕೆ, ಸಮಾಜದ ಸ್ವಾಸ್ಥ್ಯ ಕದಡುವ ಚಟುವಟಿಕೆಗೆ ಕಾನೂನು ರೀತಿಯಲ್ಲಿ ತಕ್ಕ ಉತ್ತರ ನೀಡುವ ವ್ಯವಸ್ಥೆಯಿದೆ. ಸಾಮಾನ್ಯ ಜನರಿಗೆ ಸೇವೆ ನೀಡಲು ಇಲಾಖೆಯಿಂದ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯ ಜನರ ನೆಮ್ಮದಿಯ ಜೀವನಕ್ಕೆ ಅಡ್ಡ ಬರುವವರಿಗೆ ತಕ್ಕ ಉತ್ತರ ನೀಡಲಾಗುವುದು. ಅಕ್ರಮ ಹಾಗೂ ಅಪರಾಧ ಚಟುವಟಿಕೆ ಯಾವುದೇ ಇರಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
2017 ಜನವರಿ 6 ರಂದು ಹರಿಶೇಖರನ್ ಪಶ್ಚಿಮ ವಲಯ ಐಜಿಪಿಯಾಗಿ ಅಧಿಕಾರ ವಹಿಸಿದ್ದರು. ಐಜಿಪಿ ಹರಿಶೇಖರನ್ ಬೆಂಗಳೂರು ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡರು.
ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ 1998ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇನ್ನು ಜನವರಿ 2017ರಿಂದ ಈವರೆಗೆ ಪಶ್ಚಿಮ ವಲಯ ಐಜಿಪಿಯಾಗಿದ್ದ ಹರಿಶೇಖರನ್ ಸದ್ಯ ಬೆಂಗಳೂರು ಕೇಂದ್ರ ವಲಯಕ್ಕೆ ಐಜಿಪಿಯಾಗಿ ವರ್ಗಾವಣೆಯಾಗಿದ್ದಾರೆ.
Click this button or press Ctrl+G to toggle between Kannada and English