ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ದ್ವೇಷ ಸಾಧಿಸಲು ಶಾಲೆಗಳಿಗೆ ಅನುದಾನ ರದ್ದುಗೊಳಿಸಿದೆ : ಶೋಭಾ ಕರಂದ್ಲಾಜೆ

9:09 PM, Thursday, August 17th, 2017
Share
1 Star2 Stars3 Stars4 Stars5 Stars
(No Ratings Yet)
Loading...

Shobha Karandlaje ಮಂಗಳೂರು : ರಾಜ್ಯ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಕಲ್ಲಡ್ಕದ ಶಾಲೆಗಳಿಗೆ ಅನುದಾನ ರದ್ದುಗೊಳಿಸಲಾಗಿದೆ. ಡಾ .ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಗುರಿಯಾಗಿಸಿ ರಾಜ್ಯ ಸರ್ಕಾರ ಶಾಲಾ ಮಕ್ಕಳ ಹೊಟ್ಟೆಯ ಮೇಲೆ ರಾಜಕೀಯ ದ್ವೇಷ ಸಾಧಿಸಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು .

ಶಾಲೆಗಳಿಗೆ ಅನುದಾನ ಕಾಂಗ್ರೆಸ್ ಸರಕಾರದ ತೀರ್ಮಾನ 2004ರಲ್ಲಿ ಕಾಂಗ್ರೆಸ್ ಸರ್ಕಾರ ಇರುವಾಗಲೇ ದೇವಾಲಯಗಳಿಂದ ಶಾಲೆಗಳಿಗೆ ಅನುದಾನ ನೀಡುವ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿತ್ತು. ಆ ಸಂದರ್ಭದಲ್ಲಿ ಜೇವರ್ಗಿ, ಹೂವಿನಹಡಗಲಿ , ಹೊಳೆನರಸೀಪುರ ಸೇರಿದಂತೆ ಕನಕಪುರದ ನಾಲ್ಕು ಶಾಲೆಗಳಿಗೆ ಅನುದಾನ ನೀಡುವ ಪ್ರಕ್ರಿಯೆ ಆರಂಭಿಸಲಾಗಿತ್ತು ಎಂದವರು ಹೇಳಿದರು.

2007ರಲ್ಲಿ ಯೋಜನೆ ವಿಸ್ತರಣೆ 2007ರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಶ್ರೀಕ್ಷೇತ್ರ ಕೊಲ್ಲೂರು ದೇವಾಲಯದಿಂದ ಕಲ್ಲಡ್ಕ ಹಾಗೂ ಪುಣಚ ಶಾಲೆಗಳಿಗೆ ಅನುದಾನ ನೀಡುವ ನಿಟ್ಟಿನಲ್ಲಿ ಯೋಜನೆ ವಿಸ್ತರಿಸಲಾಯಿತು ಎಂದು ತಿಳಿಸಿದರು. ಅಹಿಂದ ಜಪ ಕೇವಲ ಭಾಷಣಕ್ಕೆ ಸೀಮಿತ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಪುಣಚ ಶ್ರೀದೇವಿ ಪ್ರೌಢಶಾಲೆಯಲ್ಲಿ ಮುಖ್ಯಮಂತ್ರಿಗಳು ಹೇಳುವ ಅಹಿಂದ ವರ್ಗದ ಮಕ್ಕಳೇ ಕಲಿಯುತ್ತಿದ್ದಾರೆ .

ಈ ಎರಡು ಶಾಲೆಗಳಲ್ಲಿ ಶೇ 90% ರಷ್ಟು ಶಿಕ್ಷಣ ಪಡೆಯುತ್ತಿರುವುದು ಅಹಿಂದ ವರ್ಗಕ್ಕೆ ಸೇರಿದ ಮಕ್ಕಳು ಎಂದು ಹೇಳಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಹಿಂದ ಜಪ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ ಎಂದವರು ಕಿಡಿಕಾರಿದರು . ಕಲ್ಲಡ್ಕ ಶಾಲೆಗೆ ಒಂದು ಮುಷ್ಠಿ ಅಕ್ಕಿ ಅನುದಾನ ಕಡಿತಗೊಳಿಸುವ ಮೂಲಕ ಅಹಿಂದ ವರ್ಗದ ಮಕ್ಕಳ ಅನ್ನವನ್ನು ರಾಜ್ಯ ಸರ್ಕಾರ ಕಸಿದುಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು . ಕಲ್ಲಡ್ಕ ಶಾಲೆಯ ಅನುದಾನ ಕಡಿತಗೊಳಿಸಿರುವುದನ್ನು ವಿರೋಧಿಸಿ ಹಾಗೂ ಕಲ್ಲಡ್ಕ ಶಾಲೆಯ ಮಕ್ಕಳಿಗಾಗಿ ಭಿಕ್ಷಾ ಅಭಿಯಾನ ಇಂದಿನಿಂದ ಆರಂಭಿಸಿರುವುದಾಗಿ ಅವರು ತಿಳಿಸಿದರು

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English