ಮಂಗಳೂರು : ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ 14ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್ 27ರ ಬಾನುವಾರ ಶ್ರೀ ಗಣೇಶನ ವಿಸರ್ಜನ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು.
ಆ. 27 ರಂದು ಬೆಳಿಗ್ಗೆ 8.30 ರಿಂದ ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ ನಡೆದು ಬಳಿಕ 12. 30ಕ್ಕೆ ಅನ್ನ ಸಂತರ್ಪಣೆ ನಡೆಯಿತು., 1 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನಾಸೇವೆ ನಡೆಯಿತು. ಅಪರಾಹ್ನ 3.30ಕ್ಕೆ ವಿಸರ್ಜ ಪೂರ್ವ ಪೂಜೆ ನಡೆದು, ಬಳಿಕ ದೀಪ ಪ್ರಜ್ವಲನೆಯೊಂದಿಗೆ ಶೋಭಾ ಯಾತ್ರೆಗೆ ಚಾಲನೆ ನೀಡಲಾಯಿತು.
ಬಳಿಕ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಅವರ ನೇತ್ರತ್ವದಲ್ಲಿ ಭಜನಾ ತಂಡಗಳ ಸಂಕೀರ್ತನೆಯೊಂದಿಗೆ ಶೋಭಯಾತ್ರೆಯು ಓಂಕಾರನಗರದಿಂದ ಆರಂಭಗೊಂಡಿತು.
ಶೋಭಾಯಾತ್ರೆಯು ಓಂಕಾರ ನಗರದಿಂದ ಬಂಟ್ಸ್ ಹಾಸ್ಟೆಲ್ ವೃತ್ತ, ಪಿ ವಿ ಎಸ್, ಡೊಂಗರಕೇರಿ, ನ್ಯೂಚಿತ್ರ ಟಾಕೀಸ್, ರಥಬೀದಿ, ಶ್ರೀ ವೆಂಕಟರಮಣ ದೇವಸ್ಥಾನವಾಗಿ ಮೂಲಕ ಸಾಗಿ ಮಹಮ್ಮಾಯಿ ದೇವಸ್ಥಾನದ ಕುಡ್ತೇರಿ ಪುಷ್ಕರಣಿಯಲ್ಲಿ ದೇವರ ವಿಗ್ರಹವನ್ನು ವಿಸರ್ಜಿಸಲಾಯಿತು.
ಶೋಭಾಯಾತ್ರೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ೫೦ಕ್ಕೂ ಹೆಚ್ಚು ಭಜನಾ ತಂಡಗಳು ಪಾಲ್ಗೊಂಡಿದ್ದವು.
ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ. ಆಶಾಜ್ಯೋತಿ ರೈ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳಾದ ಶ್ರೀ ಮಂಜುನಾಥ ಭಂಡಾರಿ ಶೆಡ್ಡೆ. ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣಪ್ರಸಾದ್ ರೈ ಬೆಳ್ಳಿಪಾಡಿ, ಬಾಲಕೃಷ್ಣ ಶೆಟ್ಟಿ ಬೆಳ್ಳಿಪಾಡಿಗುತ್ತು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುಂದರ ಶೆಟ್ಟಿ, ಉಪಾಧ್ಯಕ್ಷ ವಸಂತ ಶೆಟ್ಟಿ, ಕಾರ್ಯದರ್ಶಿ ದಿವಾಕರ ಸಾಮಾನಿ ಚೇಳ್ಯಾರು ಗುತ್ತು, ಶ್ರೀ ಕೆ. ಉಮೇಶ ರೈ ಪದವು ಮೇಗಿನ ಮನೆ, ಶ್ರೀಮತಿ ಪ್ರತಿಮಾ ಆರ್ ಶೆಟ್ಟಿ,ಶ್ರೀಮತಿ ಮೀನಾ ಆರ್ ಶೆಟ್ಟಿ. ಶ್ರೀ ಜಗದೀಶ್ ಶೆಟ್ಟಿ, ಶ್ರೀ ಅಶ್ವತ್ಥಾಮ ಹೆಗ್ಡೆ ಅಲ್ತಾರ್, ಶ್ರೀ ಜಯರಾಮ ಸಾಂತ ಮುಂತಾದವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
Click this button or press Ctrl+G to toggle between Kannada and English