ಕಾರವಾರ: ಯಕ್ಷಗಾನ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಇತ್ತೀಚಿನವರೆಗೂ ಯಕ್ಷಗಾನದಲ್ಲಿ ಸಕ್ರಿಯವಾಗಿದ್ದ 84 ವರ್ಷದ ರಾಮಚಂದ್ರ ಹೆಗಡೆ ಕೆಲವಾರು ದಿನಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾತ್ತಿತ್ತು. ಆದರೆ ನಿನ್ನೆ ಚಿಕಿತ್ಸೆಗೆ ಸ್ಪಂದಿಸದೆ ಒಂಬತ್ತುಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಇವರ ಸಾವು ಕೋಟ್ಯಾಂತರ ಅಭಿಮಾನಿಗಳನ್ನು ಹಾಗೂ ಕುಟುಂಬುದವರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
1933ರ ಜನವರಿ 1ರಂದು ಚಿಟ್ಟಾಣಿ ರಾಮಚಂದ್ರ ಹೆಗಡೆಯವರು ಜಿಲ್ಲೆಯ ಹೊನ್ನಾವರದಲ್ಲಿ ಜನಿಸಿದವರು. ಏಳು ವರ್ಷ ವಯಸ್ಸಿದ್ದಾಗಲೇ ಯಕ್ಷಗಾನಕ್ಕೆ ಧುಮುಕಿದ ಹೆಗಡೆಯವರು, 14ನೇ ವಯಸ್ಸಿಗೆ ಪ್ರಮುಖ ಪಾತ್ರಗಳನ್ನು ಮಾಡಲು ಆರಂಭಿಸಿದ್ದರು. 84 ವರ್ಷದ ಇಳಿ ವಯಸ್ಸಿನಲ್ಲೂ ಅವರು ಯಕ್ಷಗಾನದ ಕುಣಿತ ಹಾಕುವುದನ್ನು ತಪ್ಪಿಸಿರಲಿಲ್ಲ.
ಚಿಟ್ಟಾಣಿ ರಾಮಚಂದ್ರ ಹೆಗಡೆಯವರದ್ದು ಬಡಗು ತಿಟ್ಟು ಯಕ್ಷಗಾನ ಶೈಲಿ. ಆದರೆ, ರಾಮಚಂದ್ರ ಹೆಗಡೆಯವರ ಕುಣಿತ ಎಷ್ಟು ಜನಪ್ರಿಯತೆ ಪಡೆದಿದೆ ಎಂದರೆ ಅವರ ಕುಣಿತವನ್ನು ಚಿಟ್ಟಾಣಿ ಘರಾನಾ ಎಂದೇ ಕರೆಯಲಾಗುತ್ತಿದೆ. ಚಿಟ್ಟಾಣಿ ಮಾಡಿರುವ ‘ಕೌರವ’, ದುಷ್ಟಬುದ್ಧಿ’, ‘ಭಸ್ಮಾಸುರ’, ‘ಕೀಚಕ’, ‘ಕರ್ಣ’, ‘ರುದ್ರಕೋಪ’, ‘ಕಂಸ’ ಮೊದಲಾದ ಪಾತ್ರಗಳು ಯಕ್ಷಗಾನ ವಲಯದಲ್ಲಿ ಬಹಳ ಜನಪ್ರಿಯವಾಗಿತ್ತು.
ಚಿಟ್ಟಾಣಿ ರಾಮಚಂದ್ರ ಹೆಗಡೆಯವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ವಿಶೇಷವೆಂದರೆ, ಈ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದರು ಅವರಾಗಿದ್ದಾರೆ.
Click this button or press Ctrl+G to toggle between Kannada and English