- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜಿಎಸ್‌ಟಿ ಬದಲಾವಣೆಯಿಂದಾಗಿ ದೀಪಾವಳಿ ಬೇಗನೆ ಬಂದಿದೆ :ಮೋದಿ

modi [1]ದ್ವಾರಕಾ: ಈ ಬಾರಿಯ ಸರಕು ಮತ್ತು ಸೇವಾ ತೆರಿಗೆ ಸಮಿತಿ ಸಭೆಯಲ್ಲಿ ತೆಗೆದುಕೊಂಡ ಉತ್ತಮ ನಿರ್ಧಾರಗಳಿಂದ ಈ ಬಾರಿಯ ದೀಪಾವಳಿ ಹಬ್ಬ ಅತ್ಯಂತ ಮುಂಚಿತವಾಗಿ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಈ ವೇಳೆ ಮಾತನಾಡಿರುವ ಅವರು, 27 ಸರಕು, ಸೇವೆಗಳ ತೆರಿಗೆ ದರ ಇಳಿಸಲು ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿರುವುದನ್ನು ಉಲ್ಲೇಖಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ನಮ್ಮ ದೇಶದ ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವುದರಿಂದ ಆರ್ಥಿಕ ಚಟುವಟಿಕೆಗಳು ಮತ್ತು ಅಭಿವೃದ್ಧಿ ಕಾರ್ಯಗಳು ಹೆಚ್ಚಾಗುತ್ತವೆ. ದೇಶದಲ್ಲಿರುವ ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ವಿಶ್ವದ ಗಮನ ಇದೀಗ ಭಾರತದ ಮೇಲಿದೆ. ಭಾರತದಲ್ಲಿ ಹೂಡಿಕೆ ಮಾಡಲು ಇದೀಗ ವಿದೇಶಗಳಿಂದ ಬರುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಭಾರತದ ಜನತೆಗೆ ಅವಕಾಶಗಳನ್ನು ಸೃಷ್ಟಿಸುತ್ತಿದೆ. ದೇಶದ ಅಭಿವೃದ್ಧಿಗೆ ಗುಜರಾತ್ ರಾಜ್ಯದ ಕೊಡುಗೆ ಅಪಾರವಾದದ್ದು. ಗುಜರಾತ್ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ ಎಂದರು.