ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ :ತುಳು ಸಾಹಿತ್ಯ ಅಕಾಡೆಮಿ

4:39 PM, Saturday, October 7th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

AC bandariಮಂಗಳೂರು :  ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನವನ್ನು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಬಂಟ್ವಾಳದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಾಗಿದೆ. ಅಕಾಡೆಮಿ ಅಧ್ಯಕ್ಷರಾದ ಎ. ಸಿ. ಭಂಡಾರಿಯವರ ಅಧ್ಯಕ್ಷತೆಯಲ್ಲಿ ಅಕಾಡೆಮಿ ವತಿಯಿಂದ ರಚಿಸಲಾದ ಉಪಸಮಿತಿಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು.

ಸಮ್ಮೇಳನದ ಸ್ವರೂಪ ಮತ್ತು ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲು ನಿರ್ದರಿಸಲಾಗಿದೆ. ತಾಲೂಕಿನಲ್ಲಿರುವ ತುಳುಪರ ಸಂಘಟನೆಗಳು, ತುಳು ಸಾಹಿತಿ, ಸಂಶೋಧಕರು, ಜಾನಪದ ಕಲಾವಿದರು ಒಳಗೊಂಡಂತೆ ಸಮಿತಿ ರಚಿಸಿಕೊಂಡು ತುಳು ಸಮ್ಮೇಳನ ನಡೆಸಲು ಸಭೆಯಲ್ಲಿ ಸೂಚಿಸಲಾ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಾಲಾಗಿದೆ.

ಸಮ್ಮೇಳನದ ವ್ಯವಸ್ಥೆಯ ಬಗ್ಗೆ ಆಯಾ ತಾಲೂಕಿನ ತುಳು ಪರ ಸಂಘಟನೆಗಳ ಪ್ರಮುಖರ ಸಲಹೆಗಳನ್ನು ಪಡೆದು ಸಮ್ಮೇಳನದ ಸ್ವರೂಪ ನಿರ್ಧರಿಸುವುದು ಒಳಿತು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English