- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಟೊ ಚಾಲಕ-ಮಾಲಕರ ಒಕ್ಕೂಟದ ನೇತೃತ್ವದಲ್ಲಿ ಓಲಾ-ಉಬರ್ ವಿರುದ್ಧ ಪ್ರತಿಭಟನೆ

auto [1]ಮಂಗಳೂರು: ನಗರದಲ್ಲಿ ಕಾನೂನುಬಾಹಿರವಾಗಿ ಆನ್‌ಲೈನ್ ಟ್ಯಾಕ್ಸಿಗಳಾದ ಓಲಾ ಮತ್ತು ಉಬರ್ ಕಾರುಗಳು ಓಡಾಟ ನಡೆಸುತ್ತಿವೆ ಎಂದು ಆರೋಪಿಸಿ ರಿಕ್ಷಾ ಚಾಲಕರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.ಮಂಗಳೂರು ನಗರ ಆಟೊ ಚಾಲಕ-ಮಾಲಕರ ಒಕ್ಕೂಟದ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಯಿತು.

auto [2]ಸಾರಿಗೆ ಪ್ರಾಧಿಕಾರ ನಿಗದಿಪಡಿಸಿರುವ ಮೀಟರ್ ದರವನ್ನೇ ಪ್ರಯಾಣಿಕರಿಂದ ಪಡೆಯಬೇಕು.ಸಾರಿಗೆ ವಾಹನಗಳು ಕಡ್ಡಾಯವಾಗಿ ಮೀಟರ್ ಅಳವಡಿಸಬೇಕೆಂಬ ನಿಯಮವಿದೆ. ನಗರದಲ್ಲಿ ಸೂಕ್ತ ಪರವಾನಿಗೆಯನ್ನು ಹೊಂದಿರಬೇಕೆಂಬ ನಿಯಮವಿದೆ. ಆದರೆ ವಿದೇಶಿ ಕಂಪೆನಿಗಳಾದ ಉಬರ್ ಮತ್ತು ಓಲಾ ಕಾರುಗಳು ಈ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು. ಈ ಆನ್‌ಲೈನ್ ಟ್ಯಾಕ್ಸಿಗಳ ಓಡಾಟದಿಂದ ಬಡ ರಿಕ್ಷಾ ಚಾಲಕರು ಸಂಕಷ್ಟ ಎದುರಿಸುವಂತಾಗಿದೆ. ಕಡಿಮೆ ಬಾಡಿಗೆ ದರಲ್ಲಿ ಪ್ರಯಾಣಿಕರನ್ನು ಸಾಗಿಸುವುದಾಗಿ ಹೇಳುವ ಈ ಆನ್‌ಲೈನ್ ಟ್ಯಾಕ್ಸಿಗಳು ರಿಕ್ಷಾ ಚಾಲಕರ ಬದುಕಿಗೆ ಕೊಡಲಿಯೇಟು ನೀಡುತ್ತಿವೆ ಎಂದು ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಓಲಾ ಮತ್ತು ಉಬರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಿಕ್ಷಾ ಚಾಲಕರು ಒತ್ತಾಯಿಸಿದರು.

ಇದಕ್ಕೂ ಮೊದಲು ಮಂಗಳೂರು ಮಿನಿ ವಿಧಾನಸೌಧದಿಂದ ಆರ್.ಟಿ.ಎ. ಕಚೇರಿಯವರೆಗೆ ಹಾಗೂ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದರು.auto [3]