ಬೆಂಗಳೂರು: ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಅವರು ನಟಿ ಮೇಘನಾ ರಾಜ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅ. 22ರಂದು ಚಿರು ಮತ್ತು ಮೇಘನಾ ರಾಜ್ ಜೋಡಿಯ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಡಿ. 6ಕ್ಕೆ ಮದುವೆ ದಿನಾಂಕ ನಿಗದಿಪಡಿಸಲಾಗಿದೆ.
ಹಿರಿಯ ನಿರ್ಮಾಪಕ ದ್ವಾರಕೀಶ್ ನಿರ್ಮಾಣದ ‘ಆಟಗಾರ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಒಟ್ಟಿಗೆ ಅಭಿನಯಿಸಿದ್ದರು. ಬಹುಕಾಲ ಸ್ನೇಹಿತರಾಗಿದ್ದ ಈ ಜೋಡಿ ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ. ಹಿರಿಯ ನಟ ಸುಂದರ್ ರಾಜ್ ಹಾಗೂ ನಟಿ ಪ್ರಮೀಳಾ ಜೋಷಾಯ್ ದಂಪತಿಯ ಏಕೈಕ ಪುತ್ರಿಯಾಗಿದ್ದಾರೆ ಮೇಘನಾ ರಾಜ್. ಚಿರಂಜೀವಿ ಸರ್ಜಾ ಹಿರಿಯ ನಟ ಅರ್ಜುನ್ ಸರ್ಜಾ ಅವರ ಸೋದರ ಅಳಿಯ(ಅಕ್ಕನ ಮಗ).
Click this button or press Ctrl+G to toggle between Kannada and English