ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿನೋಟಿಫಿಕೇಷನ್ ಆರೋಪ ಮಾಡಿರುವ ವಿಧಾನ ಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ, ರಾಜ್ಯ ಬಿಜೆಪಿ ವಕ್ತಾರ ಗೋ. ಮಧುಸೂದನ್, ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ.ಸೋಜಾ ಹೇಳಿದ್ದಾರೆ.
ಸುಪ್ರೀಂ ತೀರ್ಪು ಉಲ್ಲಂಘಿಸಿ ಬೆಂಗಳೂರು ಉತ್ತರ ತಾಲೂಕು ಭೂಪಸಂದ್ರ ಗ್ರಾಮದಲ್ಲಿ ಸುಮಾರು 300 ಕೋಟಿ ಮೌಲ್ಯದ 6 ಎಕರೆ 26 ಗುಂಟೆ ಜಮೀನನ್ನು ಮೂಲ ಮಾಲೀಕರಿಗೆ ಬಿಟ್ಟುಕೊಡುವ ಪಿತೂರಿ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಬಿಜೆಪಿಯ ಈ ಮೂವರು ನಾಯಕರು ಆರೋಪಿಸಿದ್ದಾರೆ.
Click this button or press Ctrl+G to toggle between Kannada and English