ಮಂಗಳೂರು : ಮಾದಕ ದ್ರವ್ಯ ಜಾಲ ನಿಗ್ರಹಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಾದಕ ದ್ರವ್ಯ ಜಾಲ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸೃಷ್ಟಿಯಾದುದಲ್ಲ. ಅದಕ್ಕೆ ಹಲವು ವರ್ಷದ ಇತಿಹಾಸವಿದೆ. ಅದನ್ನು ನಿಗ್ರಹಿಸಲು ಪೊಲೀಸ್ ಇಲಾಖೆ ತನ್ನದೇ ಆದ ರೀತಿಯಲ್ಲಿ ಕಾರ್ಯಾಚರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ನಡೆದ ಎಲ್ಲ ಘಟನೆಗಳಿಗೆ ಮಾದಕ ದ್ರವ್ಯ ಜಾಲದ ಜೊತೆ ಜೋಡಿಸುವುದು ಸರಿಯಲ್ಲ. ಆದರೆ, ಮಂಗಳೂರು ಸಂಸದ ಸಹಿತ ಬಿಜೆಪಿಗರು ಇದಕ್ಕೆ ರಾಜಕೀಯ ಬಣ್ಣ ಬಲಿಯುತ್ತಿದ್ದಾರೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಡ್ಕರ್, ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English