ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಒಂದೇ ರಾತ್ರಿ ಕಳ್ಳರು 12 ಕಡೆಗಳಲ್ಲಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲ್ಲೂಕಿನ ಹಲವೆಡೆ ಸರಣಿ ಕಳ್ಳತನ ನಡೆದಿದ್ದು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಮರವಂತೆ ಬೀಚ್ ಬಳಿ 3 ಕಾರಿನ ಗ್ಲಾಸ್ ಒಡೆದು ಕಳ್ಳತನ ಬೆಳ್ತಂಗಡಿಯ ಅಳದಂಗಡಿ ಎಂಬಲ್ಲಿ 7 ಅಂಗಡಿ ಸೇರಿದಂತೆ ಕಾಲೇಜಿಗೆ ನುಗ್ಗಿದ ಕಳ್ಳರು ನಗದು ಸೇರಿದಂತೆ ಇನ್ನಿತರ ವಸ್ತುಗಳನ್ನು ದೋಚಿದ್ದಾರೆ. ಬೆಳ್ತಂಗಡಿ ಪೇಟೆಯಲ್ಲೂ ಕಳ್ಳರು ತಮ್ಮ ಕೈಚಳಕ ತೋರಿದ್ದು ಅಂಗಡಿಯ ಶಟರ್ ಗಳನ್ನು ಮುರಿಯುವ ಮೂಲಕ ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ತಡರಾತ್ರಿಯ ಕೃತ್ಯ ಭಾನುವಾರ ತಡ ರಾತ್ರಿ ಈ ಕೃತ್ಯ ಎಸಗಲಾಗಿದ್ದು ಒಂದೇ ತಂಡ ಈ ಎಲ್ಲಾ ಕಳ್ಳತನಗಳಲ್ಲಿ ಭಾಗಿಯಾಗಿದೆ ಎಂದು ಶಂಕಿಸಲಾಗಿದೆ. ಎರಡು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸರಣಿ ಕಳ್ಳತನ ಪ್ರಕರಣಗಳು ನಡೆದಿದ್ದು ವರದಿಯಾಗಿದೆ.
ಪೊಲೀಸರ ವಿರುದ್ಧ ಆಕ್ರೋಶ ಪದೇ ಪದೇ ಈ ಭಾಗದಲ್ಲಿ ಸರಣಿ ಕಳ್ಳತನ ಪ್ರಕರಣಗಳು ನಡೆಯುತ್ತಿವೆ. ಇದು ವೇಣೂರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ರಾತ್ರಿ ಗಸ್ತಿನ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ತಜ್ಞರು ಭೇಟಿ ಘಟನೆ ನಡೆದ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಕಳ್ಳರು ದೋಚಿದ ಮೊತ್ತವೆಷ್ಟು ಎಂಬುದು ಈ ವರೆಗೆ ತಿಳಿದುಬಂದಿಲ್ಲ.
Click this button or press Ctrl+G to toggle between Kannada and English