ಕೇಂದ್ರ ಸರಕಾರದಿಂದ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್‍ಗೆ ಹಸಿರು ನಿಶಾನೆ

6:08 PM, Monday, October 16th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

mudra yojan
ಮಂಗಳೂರು : ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ದೇಶದಲ್ಲೇ ಅತ್ಯಂತ ವೇಗವಾಗಿ ಮಂಗಳೂರು ಸಜ್ಜಾಗುತ್ತಿದೆ. ಇದಕ್ಕಾಗಿ 90 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಈ ಸಂಬಂಧ ಆದಷ್ಟು ಬೇಗ ಕೇಂದ್ರ ಸರಕಾರದಿಂದ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್‍ಗೆ ಹಸಿರು ನಿಶಾನೆ ತೋರಿಸಲಾಗುವುದು ಎಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಹೇಳಿದ್ದಾರೆ.

ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಪುರಭವನದಲ್ಲಿ ನಡೆದ ಮುದ್ರ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಪ್ಲಾಸ್ಟಿಕ್ ಪಾರ್ಕ್‍ಗೆ ಒಂದು ಸಾವಿರ ಕೋಟಿ ರೂ. ಘೋಷಣೆಯಾಗಿದೆ. ಪಾರ್ಕ್ ನಿರ್ಮಾಣವಾದರೆ ಇಲ್ಲಿ 30ಸಾವಿರ ಉದ್ಯೋಗವಕಾಶ ಕೂಡಾ ನಿರ್ಮಾಣವಾಗುತ್ತದೆ ಎಂದರು.

ಮುದ್ರ ಯೋಜನೆಯ ಸೌಲಭ್ಯವನ್ನು ಪಡೆದವರಲ್ಲಿ ಕರ್ನಾಟಕ ನಂಬರ್ ಒನ್. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನದಲ್ಲಿದೆ . ರಾಜ್ಯದಲ್ಲಿ ಈಗಾಗಲೇ 27,29,612 ಮಂದಿಗೆ 24,894 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತದ ಸಾಲ ಯೋಜನೆ ಇಲ್ಲಿಯವರೆಗೆ ಬಂದಿಲ್ಲ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ದೇಶದಲ್ಲೇ ಅತಿ ಹೆಚ್ಚು ಅನುದಾನಗಳನ್ನು ಜಿಲ್ಲೆಗೆ ತಂದವರಲ್ಲಿ ಮೊದಲಿಗರು. ಜಿಲ್ಲೆಯ ಅಭಿವೃದ್ಧಿಗಾಗಿ ಈ ಅವಧಿಯಲ್ಲಿ ಸುಮಾರು 17ಸಾವಿರ ಕೋಟಿ ರೂ. ಅನುದಾನವನ್ನು ವಿವಿಧ ಯೋಜನೆಗಳಲ್ಲಿ ತರಿಸಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English