ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ರಾಜ್ಯ ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಶನ್ ಬೇಗ್ ವಿರುದ್ಧ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಪಿವಿಎಸ್ ವೃತ್ತದ ಬಳಿ ರಸ್ತೆ ತಡೆದು ಪ್ರತಿಭಟಿಸಿದರು.
ರಸ್ತೆಯಲ್ಲಿ ಕುಳಿತು ಪ್ರತಿಭಟಿಸುವ ಮೂಲಕ ಸಂಚಾರವನ್ನು ತಡೆದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಮಹಿಳಾ ಕಾರ್ಯಕರ್ತರು ಕೂಡಾ ಪ್ರತಿಭಟನೆಯಲ್ಲಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕ ಎನ್. ಯೋಗೀಶ್ ಭಟ್, ನಗರ ಪಾಲಿಕೆ ಸದಸ್ಯರಾದ ಗಣೇಶ್ ಹೊಸಬೆಟ್ಟು, ರೂಪಾ ಬಂಗೇರಾ, ನಾಯಕರಾದ ಕ್ಯಾ. ಬ್ರಿಜೇಶ್ ಚೌಟ, ವೇದವ್ಯಾಸ ಕಾಮತ್ ಮೊದಲಾದವರಿದ್ದರು.
Click this button or press Ctrl+G to toggle between Kannada and English