ಮಂಗಳೂರು: ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಳ್ಳಲಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ. ಖಾದರ್, ಮುಂದಿನ ವರ್ಷದ ಜನವರಿ 1ರಿಂದ ಜಿಲ್ಲೆಯ ಹತ್ತು ಕಡೆ ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿಯಲ್ಲಿ ತಲಾ 1 ಕ್ಯಾಂಟೀನ್ ತೆರೆಯಲಾಗುವುದು ಎಂದು ಮಾಹಿತಿ ನೀಡಿದರು.
45 ಸಾವಿರದಿಂದ ಒಂದು ಲಕ್ಷ ಜನಸಂಖ್ಯೆ ಇರುವ ಕಡೆಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ 500 ತಿಂಡಿ ಊಟಗಳನ್ನು ನೀಡಲಾಗುವುದು. ಇಂದಿರಾ ಕ್ಯಾಂಟೀನ್ ಆರಂಭಿಸಲು ಸ್ಥಳದ ಆಯ್ಕೆಗೆ ಈಗಾಗಲೇ ಸ್ಥಳೀಯಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
Click this button or press Ctrl+G to toggle between Kannada and English