ಮಂಗಳೂರು: ರಾಜಕೀಯ ಮೇಲಾಟದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ, ಪ್ರತ್ಯಾರೋಪ, ಜಿಲ್ಲೆಯಲ್ಲಿ ದೂರು, ಪ್ರತಿದೂರುಗಳ ಹಾವಳಿ ಜಾಸ್ತಿಯಾಗಿದೆ. ಅವಹೇಳನಕಾರಿಯಾಗಿ ಮಾತನಾಡುವುದು ಈಗ ಸರ್ವೇಸಾಮಾನ್ಯವಾಗಿದೆ.
ಇದೀಗ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದರ ವಿರುದ್ಧ ಬಿಜೆಪಿಯ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮೇಲೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರತಿಭಟನಾ ಸಭೆಯಲ್ಲಿ ಸಚಿವ ರಮಾನಾಥ ರೈಯವರನ್ನು ಪಿಲಿಗೊಬ್ಬುನ ಅರೆಮರ್ಲ (ಹುಲಿವೇಷ ಆಡುವ ಅರೆಹುಚ್ಚ) ಹಾಗೂ ಶಾಸಕಿ ಶಕುಂತಳಾ ಶೆಟ್ಟಿಯವರನ್ನು ಏಕವಚನದಲ್ಲಿ ನಿಂದಿಸಿದ ಆರೋಪದ ಮೇಲೆ ಸಂಜೀವ ಮಠಂದೂರು ಅವರ ವಿರುದ್ಧ ಉಪ್ಪಿನಂಗಡಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ದೂರು ನೀಡಿದ್ದಾರೆ.
ಸ್ತ್ರೀಯನ್ನು ದೈವೀಸ್ವರೂಪ, ಮಾತೆ ಎಂದು ವೇದಿಕೆಯಲ್ಲಿ ಹೇಳಿಕೊಳ್ಳುವ, ನೈತಿಕತೆಯ ಪಾಠ ಹೇಳುವ ಬಿಜೆಪಿ ನಾಯಕರು ಇದೀಗ ಅತ್ಯಂತ ಸಭ್ಯ ಶಾಸಕಿ ಎಂದೇ ಹೆಸರಾಗಿರುವ ಶಕುಂತಳಾ ಶೆಟ್ಟಿಯವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದು ಎಷ್ಟು ಸರಿ ಎಂದು ಮುರಳೀಧರ ರೈ ದೂರಿನಲ್ಲಿ ಪ್ರಶ್ನಿಸಿದ್ದಾರೆ.
Click this button or press Ctrl+G to toggle between Kannada and English