ಮ0ಗಳೂರು: ಸಸಿಕಾಂತ್ ಸೆಂಥಿಲ್ ಎಸ್. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಸಸಿಕಾಂತ್ ಸೆಂಥಿಲ್ ಇದುವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
Click this button or press Ctrl+G to toggle between Kannada and English