ಮೂಡುಬಿದಿರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಬೆಳಗಾವಿ, ಉಪನಿರ್ದೇಶಕರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳಗಾವಿ ಇವರ ವತಿಯಿಂದ ಅಕ್ಟೋಬರ್ 16 ರಿಂದ 18ರವರೆಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 17 ವಯೋಮಿತಿಯ ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ಆಳ್ವಾಸ್ ಪ್ರೌಢಶಾಲೆ ಮೂಡುಬಿದಿರೆ ವಿದ್ಯಾರ್ಥಿಗಳು ಒಟ್ಟು 17 ಚಿನ್ನ, 04 ಬೆಳ್ಳಿ ಹಾಗೂ 08 ಕಂಚಿನ ಪದಕಗಳನ್ನು ಪಡೆದು ಒಟ್ಟು 29 ಪದಕವನ್ನು ತನ್ನದಾಗಿಸಿಕೊಂಡು 4 ನೂತನ ಕೂಟ ದಾಖಲೆಗಳನ್ನು ಮಾಡಿರುತ್ತಾರೆ.
ಹೊಸ ಕೂಟ ದಾಖಲೆಗಳು: 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಅಣ್ಣಪ್ಪ ನಾಯಕ್- ಚಕ್ರ ಎಸೆತ, ರಿನ್ಸ್ ಜೋಸೆಫ್ – 400ಮೀ, ಗೋಪಾಲಕೃಷ್ಣ- ಪೋಲ್‍ವಾಲ್ಟ್, ಅಜಿತ್ ಎ.- ಎತ್ತರ ಜಿಗಿತದಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ.
ಈ ಕ್ರೀಡಾಕೂಟದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಯನ್ನು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಅಣ್ಣಪ್ಪ ನಾಯಕ್ ಪಡೆದು ಆಳ್ವಾಸ್‍ಗೆ ಕೀರ್ತಿ ತಂದಿರುತ್ತಾರೆ. ಆಳ್ವಾಸ್ ಪ್ರೌಢಶಾಲೆಯಿಂದ 16 ಜನ ಕ್ರೀಡಾಪಟುಗಳು ಮುಂದಿನ ನವೆಂಬರ್‍ನಲ್ಲಿ ಭೋಪಾಲ್‍ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೂಲ್ ಗೇಮ್ಸ್ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನಮ್ಮ ಕರ್ನಾಟಕ ರಾಜ್ಯ ತಂಡದಲ್ಲಿ ಅತಿ ಹೆಚ್ಚು ಕ್ರೀಡಾಪಟುಗಳು ಆಳ್ವಾಸ್ ಪ್ರೌಢಶಾಲೆಯಿಂದ ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿರುತ್ತದೆ.
Click this button or press Ctrl+G to toggle between Kannada and English