- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನರೇಂದ್ರ ಮೋದಿ ಅ. 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

PM modi [1]ಮಂಗಳೂರು: ಅ. 29ರಂದು ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅನಂತರ ಉಜಿರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅ.29ರಂದು ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಹೆಲಿಕಾಪ್ಟರ್‌ ಮೂಲಕವೇ ಉಜಿರೆಗೆ 11.40ಕ್ಕೆ ತಲುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.50ಕ್ಕೆ ನಿರ್ಗಮಿಸಿ ಹೆಲಿಕಾಪ್ಟರ್‌ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿ ಅಲ್ಲಿಂದ 1.10ಕ್ಕೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಅನಂತರ ಬೆಂಗಳೂರು, ಬೀದರ್‌ನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.