ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ಕೋವಿಂದ್

3:15 PM, Wednesday, October 25th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

ram nath kovindಬೆಂಗಳೂರು: ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಹೇಳಿದ್ದಾರೆ.

ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ಕೋವಿಂದ್ ಅವರು, ರಾಜ್ಯದ ಶಕ್ತಿ ಸೌಧ ವಿಧಾನಸೌಧಕ್ಕೆ 60 ವರ್ಷ ತುಂಬಿರುವ ಹಿನ್ನಲೆಯಲ್ಲಿ ಇಂದು ನಡೆಯುತ್ತಿರುವ ವಿವಿಧ ವಿಶೇಷ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಅಂತೆಯೇ ಇಂದು ವಿಧಾನಮಮಂಡಲ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಕೋವಿಂದ್ ಅವರು, ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೊಂದು ಸ್ಮರಣೀಯ ದಿನವಾಗಿದೆ. 3 ತಿಂಗಳ ಹಿಂದೆ ಇದೇ ದಿನ ನಾನು ಅಧಿಕಾರ ಸ್ವೀಕಾರ ಮಾಡಿದ್ದೆ, ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕರ್ನಾಟಕಕ್ಕೆ ನನ್ನ ಮೊದಲ ಭೇಟಿ ಎಂದು ಹೇಳಿದ್ದಾರೆ.

ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದ್ದು, ಸರ್ ಎಂ ವಿಶ್ವೇಶ್ವರಯ್ಯನವರು ನವ ಕರ್ನಾಟಕದ ನಿರ್ಮಾತೃಗಳಾಗಿದ್ದಾರೆ. ಅಂತೆಯೇ ಕರ್ನಾಟಕದ ಕಲಬುರಗಿ ಸೂಫಿ ಸಂತರ ನೆಲೆ ವೀಡಾಗಿದೆ ಎಂದು ಕೋವಿಂದ್ ಹೇಳಿದರು. ಇನ್ನು ತಮ್ಮ ಭಾಷಣದಲ್ಲಿ ಕೋವಿಂದ್ ರಾಜ್ಯದ ಸಿಎಂಗಳನ್ನು ಸ್ಮರಿಸಿದರು.

ಇದೇ ವೇಳೆ ರಾಷ್ಟ್ರಪತಿ ಕೋವಿಂದ್ ಅವರ ಭಾಷಣದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಹೆಸರನ್ನು ಪ್ರಸ್ತಾಪಿಸಲಿಲ್ಲ ಎಂದು ಆರೋಪಿಸಿ ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ನಗುತ್ತಲೇ ಉತ್ತರಿಸಿದ ರಾಷ್ಟ್ರಪತಿ ಕೋವಿಂದ್ ಅವರು, “ದೇವೇಗೌಡರು ಪ್ರಧಾನಿಯಾಗಿದ್ದವರು ಮತ್ತು ನನ್ನ ಸ್ನೇಹಿತರು. ನಾನಿಲ್ಲಿ ಕೆಲವರ ಹೆಸರನ್ನು ಮಾತ್ರ ಹೇಳಿದ್ದೇನೆ ಅಷ್ಟೇ.. ಆದರೆ ಕರ್ನಾಟಕಕ್ಕೆ ದೇವೇಗೌಡರ ಕೊಡುಗೆ ಮರೆಯಲು ಸಾಧ್ಯವಿಲ್ಲ ಎಂದು ಹೇಳಿ ಜೆಡಿಎಸ್ ಸದಸ್ಯರ ಸಮಾಧಾನಗೊಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English