ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶದ ಯಶಸ್ವಿಗೆ ಸರ್ವರ ಸಹಕಾರ ಅಗತ್ಯ

11:40 AM, Saturday, October 28th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Darmasthalaಮಂಗಳೂರು: ಇದೇ 29 ರಂದು ಭಾನುವಾರ ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಇದರ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ.

ಅವರು ಶುಕ್ರವಾರ ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಹೊಸ ಕಾರ್ಯಕ್ರಮಗಳನ್ನು ಉದ್ಘಾಟಿಸುವರು.

ಸಮಾವೇಶ ಯಶಸ್ವಿಗೆ ಸರ್ವರೂ ಸಹಕರಿಸಬೇಕೆಂದು ಕೋರಿದ ಅವರು ಜನಾರ್ದನ ಸ್ವಾಮಿ ದೇವಸ್ಥಾನದ ಬಳಿ, ಅನುಗ್ರಹ ಶಾಲೆ ಬಳಿ, ಅಜ್ಜರ ಕಲ್ಲು ಮೈದಾನ, ಎಂಜಿನಿಯರಿಂಗ್ ಕಾಲೇಜು ಬಳಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪಾರ್ಕಿಂಗ್ ಸ್ಥಳಗಳಲ್ಲಿ ಕುಡಿಯುವ ನೀರು ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.ಕ್ರೀಡಾಂಗಣದ ಹಿಂಭಾಗದಲ್ಲಿ ಐದು ದ್ವಾರಗಳಲ್ಲಿ ಪ್ರವೇಶಾವಕಾಶವಿದೆ. ನಲ್ವತ್ತು ಕಡೆಗಳಲ್ಲಿ ಜನರನ್ನು ತಪಾಸಣೆ ಮಾಡಿ ಒಳಗೆ ಕಳುಹಿಸಲಾಗುವುದು.

ಕ್ರೀಡಾಂಗಣದೊಳಗೆ ಹನ್ನೆರಡು ವಿಭಾಗಗಗಳಲ್ಲಿ ತಲಾ ಐದು ಸಾವಿರದಂತೆ ಅರ‍್ವತ್ತು ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಗ್ಯಾಲರಿ ವ್ಯವಸ್ಥೆಯೂ ಇದೆ. ಅರ‍್ವತ್ತು ಸಾವಿರ ಮಂದಿ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಇಪ್ಪತ್ತೈದು ಸಾವಿರ ಮಂದಿ ಬಿ.ಜೆ.ಪಿ. ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. ಸಭಾ ಕಾರ್ಯಕ್ರಮ ಬೆಳಿಗ್ಗೆ 11.45ಕ್ಕೆ ಆರಂಭವಾಗಿ 12.45ಕ್ಕೆ ಮುಕ್ತಾಯವಾಗುತ್ತದೆ. ನೀರಿನ ಬಾಟ್ಲಿ ಹಾಗೂ ಪರ್ಸ್ ಮತ್ತು ಇತರ ವಸ್ತುಗಳನ್ನು ಒಳಗೆ ಕೊಂಡು ಹೋಗಬಾರದು. ಎಲ್ಲರೂ ಬೆಳಿಗ್ಗೆ 10.30ರೊಳಗೆ ಸಭೆಯಲ್ಲಿ ಆಸೀನರಾಗಬೇಕು ಎಂದು ಅವರು ಸೂಚಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English