ಮಂಗಳೂರು:ಹಿಂದೂಪರ ಸಂಘಟನೆಗಳು ನೀಡಿದ್ದ ಕಡಬ ಬಂದ್‌ಗೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಪೊಲೀಸರು ಅಮಾಯಕ ಹಿಂದೂ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲಿಸಿದ್ದಾರೆ.
ಕಡಬದಲ್ಲಿ ಈ ಹಿಂದೆ ಮಕ್ಕಾ ಮಸೀದಿಯ ಅವಹೇಳನ ನಡೆಸಿರುವ ಪ್ರಕರಣದಲ್ಲಿ ಆರೋಪಿಯನ್ನು ಹಿಂದೂ ಸಂಘಟನೆಯ ಮುಖಂಡರೇ ಠಾಣೆಗೆ ಒಪ್ಪಿಸಿದ್ದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಸಹಕಾರ ನೀಡುತ್ತಿದ್ದರೂ ಪ್ರಕರಣಕ್ಕೆ ಸಂಬಂಧಪಡದ ವ್ಯಕ್ತಿಗಳನ್ನು ಪ್ರಕರಣದಲ್ಲಿ ಸೇರ್ಪಡೆಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಪೊಲೀಸ್ ಇಲಾಖೆಯ ದ್ವಿಮುಖ ನೀತಿಯ ವಿರುದ್ಧ ಕಡಬ ಬಂದ್‌ಗೆ ಕರೆ ನೀಡಲಾಗಿದೆ. ಈ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಬೀದಿಯಲ್ಲಿ ಮೆರವಣಿಗೆ ನಡೆಸಿ ಪೊಲೀಸರ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೀಪು, ಟೆಂಪೋ, ರಿಕ್ಷಾ ಚಾಲಕರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಕೆಲವು ವಾಹನಗಳು ಮಾತ್ರ ಬಾಡಿಗೆ ನಡೆಸುತ್ತಿರುವುದು ಕಂಡುಂಬಂದಿದೆ.
Click this button or press Ctrl+G to toggle between Kannada and English